ರಾಯಚೂರು | ಅಂತರ್ ಇಲಾಖೆ ಸಮನ್ವಯ ಸಮಿತಿ ಸಭೆ
ರಾಯಚೂರು : ಮುಂಬರುವ ಬೇಸಿಗೆ ದಿನಗಳಲ್ಲಿ ಬಿಸಿಲಿನ ಪ್ರಕರತೆಯಿಂದ ಜಿಲ್ಲೆಯ ಜನರ ಆರೋಗ್ಯ ಮೇಲೆ ಆಗುವ ದುಷ್ಪರಿಣಾಮಗಳ ಕುರಿತು ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಂ ಪಾಂಡ್ವೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಫೆ.11ರ ಮಂಗಳವಾರದಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಸಿ ಸಭಾಂಗಣದಲ್ಲಿ ʼಅಂತರ ಇಲಾಖೆ ಸಮನ್ವಯ ಸಮಿತಿ ಸಭೆʼಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಕಳೆದ ವರ್ಷ ಬಿಸಿಲಿನ ಪ್ರಖರತೆಯಿಂದ ಸಾರ್ವಜನಿಕರು ಯಾವ ರೀತಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಎಂಬದರ ಬಗ್ಗೆ ವ್ಯಾಪಕ ಪ್ರಚಾರ ಮಾಡಲಾಗಿತ್ತು. ಅದರಂತೆ ಈ ವರ್ಷವೂ ಕೂಡ ಬಿಸಿಲಿನ ಪ್ರಕರತೆಯಿಂದ ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಗರ್ಭಿಣಿಯರನ್ನು ರಕ್ಷಿಸಿಕೊಳ್ಳಲು ವಿಶೇಷ ಕಾಳಜಿವಹಿಸಬೇಕು. ಅಲ್ಲದೆ ಬೇಸಿಗೆ ವೇಳೆ ಉಂಟಾಗುವ ಅನಾರೋಗ್ಯ ಸಮಸ್ಯೆಗಳನ್ನು ತಡೆಯಲು ಅಗತ್ಯ ಕ್ರಮವಹಿಸಿ, ಸಮಗ್ರ ಯೋಜನೆಗಳನ್ನು ರೂಪಿಸಿ ಅನುಸರಿಸುವ ಮೂಲಕ ಜನರ ಆರೋಗ್ಯವನ್ನು ಕಾಪಾಡಿಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ ಹಾಗೂ ಪೊಲೀಸ್ ಇಲಾಖೆಯ ಸೈಬರ್ ಘಟಕದ ನಿರ್ದೇಶಕ ರವಿಶೇಖರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು, ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಯಪ್ರಕಾಶ್, ಪಶು ಸಂಗೋಪನಾ ಇಲಾಖೆಯ ನಿರ್ದೇಶಕರಾದ ಅಶೋಕ ಕೋಲಕಾರ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ ಎಂ.ಎನ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಯಶೋದಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಕುಮಾರ, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ.ಮಹ್ಮದ್ ಶಾಕೀರ್ ಮೊಹಿಯುದ್ದೀನ್, ಆಶ್ರಿತ ರೋಗಗಳ ಜಿಲ್ಲಾ ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರಯ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.