ರಾಯಚೂರು: ನಗರದ ಶ್ರೀಲಕ್ಷ್ಮೀ ವೆಂಕಟೇಶ ದೇಸಾಯಿ ಕಾಲೇಜು (ಎಲ್‌ವಿಡಿ) ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 16ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ನವೀನಕುಮಾರ್ ಸಂಗೇಪಾಗ್ ಮನವಿ ಮಾಡಿದ್ದಾರೆ.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಸಂಸ್ಥೆಗಳು ನೇರ ಸಂದರ್ಶನದ ಮೂಲಕ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ.

ಅರ್ಹತೆಗಳು: ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ ಹಾಗೂ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ 18ರಿಂದ 28 ವರ್ಷ ವಯೋಮಾನದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು, ಬಯೋಡೇಟಾ, ಆಧಾರ್ ಕಾರ್ಡ್‌ನ ಪ್ರತಿ ಹಾಗೂ ಭಾವಚಿತ್ರಗಳನ್ನು ತರಬೇಕು. ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ. ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಉದ್ಯೋಗ ಮೇಳಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬಾಲಾಜಿ ಕಾಂಪ್ಲೆಕ್ಸ್, ನೆಲಮಹಡಿ, ಗೂಡ್‌ಶೆಡ್ ರಸ್ತೆ, ಸ್ಟೇಷನ್ ಏರಿಯಾ, ರಾಯಚೂರು ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳಾದ 08532-231684, 9008211750 ಹಾಗೂ 991693166ಕ್ಕೆ ಕಚೇರಿ ಸಮಯದಲ್ಲಿ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ನವೀನಕುಮಾರ್ ಸಂಗೇಪಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor