ರಾಯಚೂರು: ಸ್ಟೀಲ್ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಢಿಕ್ಕಿ ಹೊಡೆದ ಘಟನೆ ಶುಕ್ರವಾರ ಬೆಳಗ್ಗೆ ನಗರದ ಹಳೆಯ ಎಸ್‌ಎನ್‌ಟಿ ಟಾಕೀಸ್ ಸಮೀಪದ ರಸ್ತೆಯಲ್ಲಿ ನಡೆದಿದೆ.

ಹೈದರಾಬಾದ್‌ನಿಂದ ಬಳ್ಳಾರಿಗೆ ಸ್ಟೀಲ್ ಸಾಗಿಸುತ್ತಿದ್ದ ಲಾರಿ ನಗರದ ಸಿಟಿ ಟಾಕೀಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಲಾರಿ ಡಿವೈಡರ್‌ನಲ್ಲಿ ಸಿಲುಕಿಕೊಂಡಿದ್ದು, ಅಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ಕಂಬ ನೆಲಕ್ಕುರುಳಿದೆ. ಇದರಿಂದ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಬೆಳಗಿನ ಸಮಯದಲ್ಲಿ ಘಟನೆ ಸಂಭವಿಸಿದ್ದರಿಂದ ವಾಹನ ಸವಾರರು ತೊಂದರೆ ಅನುಭವಿಸಿದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದರು. ಬಳಿಕ ಕ್ರೇನ್ ಸಹಾಯದಿಂದ ಅಪಘಾತಕ್ಕೀಡಾದ ಲಾರಿಯನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಘಟನೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಬಾವಸಲಿ ರಾಯಚೂರು/ವಾರ್ತಾಭಾರತಿ

ರಾಯಚೂರು ಜಿಲ್ಲಾ ವರದಿಗಾರರು

ಬಾವಸಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ