ರಾಯಚೂರು | ಬೈಕ್‌ಗೆ ಲಾರಿ ಢಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು
Update: 2025-06-11 23:02 IST
ಸಾಂದರ್ಭಿಕ ಚಿತ್ರ
ರಾಯಚೂರು : ಬೈಕ್‌ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರೆ ಬೂದೂರು ಗ್ರಾಮದ ಸಮೀಪ ನಡೆದಿದೆ.
ಮೃತರನ್ನು ಅಶೋಕ ಬಿಲ್ಲಳ್ಳಿ(24) ಎಂದು ಗುರುತಿಸಲಾಗಿದೆ.
ಆಂಧ್ರದ ಆಲೂರಿನಿಂದ ರಾಯಚೂರಿನ ಕಲ್ಲೂರಿಗೆ ಹೊರಟಿದ್ದ ಕೆಟಿಎಂ ಬೈಕ್ ಸವಾರನಿಗೆ ಮಂತ್ರಾಲಯ ಕಡೆಗೆ ಹೊರಟಿದ್ದ ಲಾರಿ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಇಡಪನೂರು ಪೊಲೀಸರು, ಸ್ಥಳೀಯರಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿ, ಮೃತ ದೇಹವನ್ನು ರಾಯಚೂರು ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.