ರಾಯಚೂರು | ಹೃದಯಘಾತದಿಂದ ವ್ಯಕ್ತಿ ಮೃತ್ಯು
Update: 2025-07-12 19:13 IST
ರಾಯಚೂರು: ತಾಲೂಕಿನ ಡಿ.ರಾಂಪೂರು ಗ್ರಾಮದಲ್ಲಿ ರೈತನೊರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಡಿ.ರಾಂಪೂರ ಗ್ರಾಮದ ನಿವಾಸಿ ಉಪ್ಪರ ವೆಂಕಟೇಶ್ (45) ಎಂದು ಗುರುತಿಸಲಾಗಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದು, ತಕ್ಷಣವೇ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲೇ ವೆಂಕಟೇಶ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.