×
Ad

ರಾಯಚೂರು | ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಬಟ್ಟೆ ಕಳಚಿ ಅಸಭ್ಯ ವರ್ತನೆ : ವಿಡಿಯೋ ವೈರಲ್

Update: 2025-06-24 19:20 IST

ರಾಯಚೂರು:ರೈಲ್ವೆ ಎಸಿ ಬೋಗಿಯಲ್ಲಿ ಪ್ರಯಾಣಿಕನೊರ್ವ ಅಸಭ್ಯ ವರ್ತನೆ ಮಾಡಿರುವ ಘಟನೆ ರಾಯಚೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.

ವ್ಯಕ್ತಿಯೊರ್ವ ಟಿಕೆಟ್ ಇಲ್ಲದೇ ರೈಲ್ವೆ ಏಸಿ ಬೋಗಿಯಲ್ಲಿ ಪ್ರಯಾಣ ಮಾಡಿದ್ದು, ಇದನ್ನು ಪ್ರಶ್ನಿಸಿದ ಮಹಿಳಾ ಪ್ರಯಾಣಿಕರಿಗೆ ಬಟ್ಟೆ ಬಿಚ್ಚಿ ಅಸಭ್ಯ ವರ್ತನೆ ತೋರಿದ್ದಾನೆ ಎನ್ನಲಾಗಿದೆ.

ಈ‌ ಕುರಿತು ಆರ್ ಪಿಎಫ್ ಮತ್ತು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರೂ, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರಯಾಣಿಕರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಅಸಭ್ಯ ವರ್ತನೆ ತೋರಿದ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುವಂತೆ ಮಹಿಳಾ ಪ್ರಯಾಣಿಕರು ಪೊಲೀಸರಿಗೆ ತಿಳಿಸಿದರೂ, ಸ್ಥಳದಲ್ಲಿದ್ದ ಪೋಲಿಸರು ಅಲ್ಲಿಂದ ಹೊರಟು ಹೋಗಿದ್ದಾರೆ. ಪೊಲೀಸರ ಈ ನಡೆಗೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News