×
Ad

Raichur | ಸಚಿವರಿಂದ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಣೆ

Update: 2026-07-04 08:46 IST

ರಾಯಚೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಮೀಡಿಯಾ ಕಿಟ್‌ಗಳನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಶುಕ್ರವಾರ ಸಾಂಕೇತಿಕವಾಗಿ ವಿತರಿಸಿದರು.

ರಾಯಚೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರಾದ ಶಿವಪ್ಪ ಮಡಿವಾಳರ್, ಮಲ್ಲಿಕಾರ್ಜುನ ಸ್ವಾಮಿ, ಖಾನ್ ಸಾಬ್ ಮೋಮಿನ್ ಹಾಗೂ ವಿಶ್ವನಾಥ ಸಾಹುಕಾರ್ ಅವರಿಗೆ ಮೀಡಿಯಾ ಕಿಟ್‌ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಸಂಸದ ಜಿ.ಕುಮಾರ ನಾಯಕ, ಶಾಸಕರಾದ ಜಿ.ಹಂಪಯ್ಯ ನಾಯಕ ಸಾಹುಕಾರ್, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಜಿ.ಸುರೇಶ್, ಜಿಲ್ಲಾ ಪಂಚಾಯತ ಉಪ‌ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಸಭೆಯಲ್ಲಿ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News