ರಾಯಚೂರು| ತಲಮಾರಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಭೂಮಿ ಪೂಜೆ
ರಾಯಚೂರು: ಮಹರ್ಷಿ ವಾಲ್ಮೀಕಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಡಿ.6ರಂದು ತಲಮಾರಿ ಗ್ರಾಮಕ್ಕೆ ಭೇಟಿ ನೀಡಿ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪನೆ ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯಿಂದ ಶ್ರೀ ಚೌಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಹಾಗೂ ಲೋಕೋಪಯೋಗಿ ಇಲಾಖೆಯಿಂದ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೇಥೋಡಿಸ್ಟ್ ಚರ್ಚ್ ದೇವಾಲಯದಲ್ಲಿ ಶೆಡ್ ನಿರ್ಮಾಣ ಹಾಗೂ ಶಾದಿ ಮಹಲ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಕೂಡ ಅವರು ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ರಾಮರಾವ್ ತಾತ ಬುಡದಿನ್ನಿ, ಗಿಲ್ಲೇಸೂಗುರ ಬ್ಲಾಕ್ ಅಧ್ಯಕ್ಷರು, ಊರಿನ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಹಿರಿಯ ಮುಖಂಡರು, ನಾಮನಿರ್ದೇಶಿತ ಸದಸ್ಯರು, ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.