×
Ad

ರಾಯಚೂರು | ಶ್ರೀ ಕರಿಯಪ್ಪ ತಾತನವರ ಜಾತ್ರೆಗೆ ಅಗತ್ಯ ಸಿದ್ಧತೆಯಾಗಲಿ: ಶಾಸಕ ಬಸನಗೌಡ ದದ್ದಲ್

Update: 2025-07-19 20:55 IST

ರಾಯಚೂರು : ಜು.29ರ ಸಂಜೆ 6.30ಕ್ಕೆ ಸಹಸ್ರಾರು ಭಕ್ತರೊಂದಿಗೆ ನಡೆಯುವ ಶ್ರೀ ಕರಿಯಪ್ಪ ತಾತನವರ ಜಾತ್ರಾ ರಥಮಹೋತ್ಸವನ್ನು ಭಕ್ತಿ ಶ್ರದ್ಧೆಯಿಂದ ಶಾಂತಿಯುತವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಶಾಸಕರ ಕಚೇರಿಯಲ್ಲಿ ಜು.19ರಂದು ಶ್ರೀ ಕರಿಯಪ್ಪ ತಾತನವರ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು.

ಶ್ರೀ ಕರಿಯಪ್ಪ ತಾತನವರ ಜಾತ್ರೆಯು ನಮ್ಮ ಭಾಗದಲ್ಲಿ ವಿಶೇಷವಾಗಿ ನಡೆಯುತ್ತದೆ. ಈ ಜಾತ್ರೆಗೆ ರಾಜ್ಯದ ಬೇರೆ ಬೇರೆ ಭಾಗದ ಜನರು ಸೇರಿದಂತೆ ಅಂತರಾಜ್ಯದ ಜನರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಯಾವುದೇ ರೀತಿಯ ತೊಂದರೆಗಳು ಆಗದ ಹಾಗೆ ಈಗಿನಿಂದಲೇ ಅಧಿಕಾರಿಗಳು ಸಿದ್ಧತಾ ಕಾರ್ಯ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡರು, ಗ್ರಾಮಸ್ಥರು, ನಾಮ ನಿರ್ದೇಶನ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಸಭೆಯಲ್ಲಿ ಭಾಗಿಯಾಗಿ ನಾನಾ ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಜೆಸ್ಕಾಂ ಇಲಾಖೆ, ಅಬಕಾರಿ ಇಲಾಖೆ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News