ರಾಯಚೂರು | ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ
Update: 2025-08-19 19:29 IST
ಸಾಂದರ್ಭಿಕ ಚಿತ್ರ
ರಾಯಚೂರು : ರಸ್ತೆ ಬದಿಯಲ್ಲಿ ಆಗ ತಾನೇ ಜನಿಸಿದ ನವಜಾತ ಗಂಡು ಶಿಶು ಪತ್ತೆಯಾಗಿರುವ ಘಟನೆ ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದ ಕಲ್ಲೂರು ರಸ್ತೆಯ ಬಳಿ ನಡೆದಿದೆ.
ಶಿಶು ಅಳುವ ಶಬ್ದ ಕೇಳಿ ದಾರಿಹೋಕರು ಕಲ್ಮಲಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಶಿಶುವನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಿಶು ಆಸ್ಪತ್ರೆಯಲ್ಲಿ ಆರೋಗ್ಯವಾಗಿದ್ದು, ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿಶುವಿನ ಹೆತ್ತವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.