ರಾಯಚೂರು: ನ. 29ರಂದು ನಡೆಯಲಿರುವ ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ 25ನೇ ವರ್ಷದ ಬೆಳ್ಳಿ ಮಹೋತ್ಸವದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್‌.ಎಸ್.ಬೋಸರಾಜು ಅವರು ನಗರದ ಪತ್ರಿಕಾ ಭವನಕ್ಕೆ ಭೇಟಿ ನೀಡಿ, ಬೆಳ್ಳಿ ಮಹೋತ್ಸವ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಪತ್ರಿಕಾ ಭವನಕ್ಕೆ ಭೇಟಿ ನೀಡಿದ ಅವರು, ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು. ಪತ್ರಕರ್ತರ ಸಂಘಟನೆಯ 25 ವರ್ಷಗಳ ಪಯಣಕ್ಕೆ ಅಭಿನಂದನೆ ಸಲ್ಲಿಸಿದ ಅವರು, ಪತ್ರಕರ್ತರು ಸಮಾಜದ ಆಗುಹೋಗುಗಳನ್ನು ಜನರಿಗೆ ತಲುಪಿಸುವ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಪತ್ರಿಕಾ ಕ್ಷೇತ್ರದ ಚಟುವಟಿಕೆಗಳು ಹಾಗೂ ಪತ್ರಕರ್ತರ ಸಂಘಟನೆಯ ಕಾರ್ಯಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ಬಿ. ವೆಂಕಟಸಿಂಗ್, ಆರ್.ಡಿ.ಎ ಅಧ್ಯಕ್ಷ ರುದ್ರಪ್ಪ ಅಂಗಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಶಾಂತಪ್ಪ, ಹಿರಿಯ ಪತ್ರಕರ್ತ ಕಿಶನ್‌ರಾವ್, ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ ಜಾಗಟಗಲ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆರ್. ಗುರುನಾಥ, ಗಿಲ್ಡ್ ಕಾರ್ಯದರ್ಶಿ ವೆಂಕಟೇಶ್ ಹೂಗಾರ್, ಪ್ರಮುಖರಾದ ಜಿ. ಶಿವಮೂರ್ತಿ, ಜಯಂತರಾವ್ ಪತಂಗೆ, ಅಮರೇಗೌಡ ಹಂಚಿನಾಳ, ಹಿರಿಯ ಪತ್ರಕರ್ತರು, ಗಿಲ್ಡ್‌ನ ಪದಾಧಿಕಾರಿಗಳು ಹಾಗೂ ವಿವಿಧ ಮಾಧ್ಯಮಗಳ ಪತ್ರಕರ್ತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಬಾವಸಲಿ ರಾಯಚೂರು/ವಾರ್ತಾಭಾರತಿ

ರಾಯಚೂರು ಜಿಲ್ಲಾ ವರದಿಗಾರರು

ಬಾವಸಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ