×
Ad

ರಾಯಚೂರು | ಅಪೂರ್ಣಗೊಂಡ ಅಂಗನವಾಡಿ ಅರ್ಜಿ ಸಲ್ಲಿಕೆಗೆ ಜ.15 ರವರೆಗೆ ಅವಕಾಶ

Update: 2026-01-10 09:25 IST

ರಾಯಚೂರು: ತಾಲ್ಲೂಕಿನ ಗಿಲ್ಲೇಸೂಗೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 13 ಅಂಗನವಾಡಿ ಕಾರ್ಯಕರ್ತೆ ಹಾಗೂ 29 ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ, ತಮ್ಮ ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸಲು ಜನವರಿ 15ರವರೆಗೆ ಕಾಲಾವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಒಟ್ಟು 4 ಹಂತಗಳಿದ್ದು, ಅನೇಕ ಅಭ್ಯರ್ಥಿಗಳು ಈ ಹಂತಗಳನ್ನು ಪೂರ್ಣಗೊಳಿಸದಿರುವುದು ಕಂಡುಬಂದಿದೆ. ಅಂತಹ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ.

ಆನ್‌ಲೈನ್ ತಂತ್ರಾಂಶದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ಮಾಹಿತಿ ತುಂಬುವುದು. ಅಭ್ಯರ್ಥಿಯ ಭಾವಚಿತ್ರ ಹಾಗೂ ಸಹಿಯನ್ನು ಅಪ್‌ಲೋಡ್ ಮಾಡುವುದು. ಎಲ್ಲಾ ಅಗತ್ಯ ಮೂಲ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು. ಆಧಾರ್ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರದೊಂದಿಗೆ (e-Sign) ಅರ್ಜಿಯನ್ನು ಅಂತಿಮವಾಗಿ ಸಲ್ಲಿಸುವುದು.

ಅಭ್ಯರ್ಥಿಗಳು ವೆಬ್‌ಸೈಟ್ ವಿಳಾಸ: https://karnemakaone.kar.nic.in/abcd/ ನಲ್ಲಿ ಜ.15ರ ಒಳಗಾಗಿ ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಒಂದು ವೇಳೆ ಅರ್ಜಿಗಳು ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಗಳನ್ನು ನೇರವಾಗಿ ತಿರಸ್ಕರಿಸಲಾಗುವುದು ಎಂದು ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಗಿಲ್ಲೇಸೂಗೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News