×
Ad

ರಾಯಚೂರು | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ : ಇಬ್ಬರ ಬಂಧನ

Update: 2024-11-07 21:41 IST

ಸಾಂದರ್ಭಿಕ ಚಿತ್ರ

ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಆಮದಿಹಾಳ ಗ್ರಾಮದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಗುರುವಾರ ನಡೆದಿದೆ.

ದಾಳಿಯ ವೇಳೆ ವೆಂಕಟೇಶ ಅಮರೇಶ (33) ಮತ್ತು ಲತಾ ಶ್ರೀನಿವಾಸ್ (38) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಆಮದಿಹಾಳ ಗ್ರಾಮದ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಮಸ್ಕಿ ಸಿಪಿಐ ಬಾಲಚಂದ್ರ ಅವರ ನೇತೃತ್ವದ ತಂಡ ಸಂತ್ರಸ್ತೆಯನ್ನು ರಕ್ಷಣೆ ಮಾಡಿ, ಸಾಂತ್ವನ ಕೇಂದ್ರಕ್ಕೆ ಕಳಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News