Raichur | ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಭಾವಚಿತ್ರ ಮೆರವಣಿಗೆ

Update: 2026-08-04 21:38 IST

ರಾಯಚೂರು, ಆ.5: ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ನಗರದಲ್ಲಿ ಮಂಗಳವಾರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.

ನಗರದ ಬಸವೇಶ್ವರ ವೃತ್ತದಿಂದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದವರೆಗೆ ನಡೆದ ಮೆರವಣಿಗೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ಹಡಪದ ಅಪ್ಪಣ್ಣ ಅವರ ಭಾವಚಿತ್ರವನ್ನು ಹೊತ್ತು ಸಮಾಜದ ಮುಖಂಡರು, ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದರು.

ಈ ಸಂದರ್ಭದಲ್ಲಿ ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News