×
Ad

ರಾಯಚೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

Update: 2025-07-04 16:45 IST

ರಾಯಚೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಯಚೂರಿನ ಎಲ್ ಬಿಎಸ್ ನಗರದ ಹಬೀಬಿಯ ಮಸೀದಿಯ ಮುಂದೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.

ಆಲ್ ಇಂಡಿಯಾ ಪರ್ಸನಲ್ ಲಾ ಬೋರ್ಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಸುಮಾರು ಅರ್ಧ ಕಿ.ಮೀ ವರೆಗೆ ಮಾನವ ಸರಪಳಿ ನಿರ್ಮಿಸಿ ವಕ್ಪ್ ತಿದ್ದುಪಡಿ ಕಾಯ್ದೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಶುಕ್ರವಾರದ ಪ್ರಾರ್ಥನೆ ಮುಗಿಸಿ ಮುಸ್ಲಿಮರು ಭಿತ್ತಿ ಪತ್ರ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು.

ಮುಸ್ಲಿಂ ಧರ್ಮಗುರುಗಳು, ಎಸ್ ಡಿಪಿಐ ಮುಖಂಡರು ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News