Raichur | ವೀರಶೈವ ಲಿಂಗಾಯತ ಸಮಾಜದವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಧರಣಿ

Update: 2026-08-10 18:58 IST

ರಾಯಚೂರು: ಜಿಲ್ಲೆಯ ಪ್ರಭಾವಿ, ಹಿರಿಯ ನಾಯಕ ಹಾಗೂ ವೀರಶೈವ ಲಿಂಗಾಯತ ಸಮಾಜದ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ವೀರಶೈವ ಲಿಂಗಾಯತ ಸಮಾಜ ಜಿಲ್ಲಾ ಘಟಕದ ನೇತೃತ್ವದಲ್ಲಿ ಸಮಾಜದ ಮುಖಂಡರು ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಬಸವೇಶ್ವರ ವೃತ್ತದ ಬಳಿಯಲ್ಲಿ ಪುತ್ಥಳಿ ಮಾಲಾರ್ಪಣೆ ಮಾಡಿ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಟೈರ್ ಗೆ ಬೆಂಕಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕರ್ತನೋರ್ವ ಮೈಮೇಲೆ ಪೆಟ್ರೋಲ್ ಸುರುವಿಗೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಘಟನೆ ನಡೆಯಿತು.

ಪ್ರತಿಭಟನಾಕಾರರು ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು.

2002 ರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ, ವೀರಶೈವ ಲಿಂಗಾಯತ ಸಮಾಜಕ್ಕೆ ಅನ್ಯಾಯವಾಗುತ್ತಲೇ ಬಂದಿದೆ. ಜಿಲ್ಲೆಯ ಏಳುವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಗೆಲುವು ಸಾಧಿಸಿದ್ದಾರೆ. ನಾಲ್ಕು ಜನ ವಿಧಾನ ಪರಿಷತ್ ಸದಸ್ಯರುಗಳಿದ್ದಾರೆ. ಆದರೆ ಕಳೆದ ಐದು ಬಾರಿ ಸಿಂಧನೂರು ಕ್ಷೇತ್ರದಿಂದ ಗೆಲುವು ಸಾಧಿಸಿರುವ ಹಂಪನಗೌಡ ಬಾದರ್ಲಿಯವರು ಸರಳ ,ಸಜ್ಜನಿಕೆ, ಮುತ್ಸದಿಯಾಗಿದ್ದು, ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸಚಿವ ಸ್ಥಾನದಿಂದ ವಂಚಿತವಾಗಿರುವ ರಾಯಚೂರು ಜಿಲ್ಲೆಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಹಾಗೂ ಕೆಪಸಿಸಿ ಅಧ್ಯಕ್ಷರಿಗೆ ಬರೆದ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಭೂಪಾಲ ನಾಡಗೌಡ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪುರು, ಬಸವ ಕೇಂದ್ರದ ಅಧ್ಯಕ್ಷ ರಾಚನಗೌಡ ಕೋಳೂರು,ವೀರಶೈವ ರುದ್ರಸೇನೆ ಅಧ್ಯಕ್ಷ, ಅಮರೇಶ ಶಿವನಾಗಪ್ಪ ಸೇರಿದಂತೆ ಸಿಂಧನೂರು, ದೇವದುರ್ಗ ಸೇರಿದಂತೆ ಹಲವರು ಭಾಗಿಯಾಗಿದ್ದರು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News