×
Ad

ರಾಯಚೂರು | ನಿವೃತ್ತ ಅಂಗನವಾಡಿ ಕಾರ್ಯಕರ್ತರಿಗೆ ಗ್ರಾಚ್ಯುಟಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Update: 2025-10-29 17:45 IST

ರಾಯಚೂರು: ನಿವೃತ್ತಿಯಾದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗ್ರಾಚ್ಯುಟಿ ಮೊತ್ತ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತರ ಸಂಘದ ಪದಾಧಿಕಾರಿಗಳು ಇಂದು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಸುಮಾರು 20 ಸಾವಿರ ವಯೋವೃದ್ಧರು ಯಾವುದೇ ಆರ್ಥಿಕ ಆಸರೆ ಇಲ್ಲದೇ ಜೀವನ ನಡೆಸುತ್ತಿದ್ದಾರೆ. ಅವರೆಲ್ಲರಿಗೂ ಗ್ರಾಚ್ಯು ನೀಡಬೇಕು. ಗ್ರಾಚ್ಯುಟಿ ಜಾರಿಗೊಳಿಸಬೇಕು ಎಂದು ಆಗ್ರಹಿಸಲಾಯಿತು.

2011-23 ಸಾಲಿನ ಬಳಿಕ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪೈಕಿ ಈಗಾಗಲೇ ಬಹಳಷ್ಟು ಜನ ಮೃತಪಟ್ಟಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸಂಬಳ ಹಾಗೂ ಇತರೆ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕನಿಷ್ಠ ವೇತನಕ್ಕಿಂತ ಕಡಿಮೆ ಗೌರವ ಧನದಲ್ಲಿ ದುಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.

1975 ಅಕ್ಟೋಬರ್ 2 ರಂದು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಶಿಶುವಿನಂತೆ ಇತ್ತು. ಈ ಯೋಜನೆ ಹೆಮ್ಮರವಾಗಿ ಬೆಳೆದು ರಾಜ್ಯದಲ್ಲಿ ಸುಮಾರು 50 ಲಕ್ಷ ಫಲಾನುಭವಿಗಳಿದ್ದಾರೆ. ಮಾತ್ರವಲ್ಲದೇ ಮಾನವ ಸಂಪನ್ಮೂಲಗಳ ಬೆಳವಣಿಗೆಯನ್ನು ಖಾತ್ರಿಪಡಿಸುವ ಯೋಜನೆಯಾಗಿ ಬೆಳೆದಿದೆ.ಇಂತಹ ಯೋಜನೆಯ ಅಭಿವೃದ್ಧಿಗೆ 150, 75 ರೂ.ಗಳಿಂದ ಹಿಡಿದು ಸಾವಿರಾರು ಜನ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ದುಡಿದಿದ್ದಾರೆ. ಈ ಆದೇಶ 2011 ರಿಂದ 2023 ಮಾರ್ಚ್ ತನಕ ನಿವೃತ್ತಿಯಾದ 10,311 ಅಂಗನವಾಡಿ ಕಾರ್ಯಕರ್ತೆಯರು, 11.980 ಅಂಗನವಾಡಿ ಸಹಾಯಕಿಯರಿಗೂ ಅನ್ವಯಿಸಬೇಕು. ಹಿಂದಿನವರೆಗೂ ಅನ್ವಯಿಸಬೇಕು ಎಂಬ ಸತತ ಒತ್ತಾಯಗಳಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಸುಮಾರು  183 ಕೋಟಿ ರೂ. ಅನುದಾನದ ಬಿಡುಗಡೆಗಾಗಿ ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ. ಆದರೆ ಹಣಕಾಸು ಇಲಾಖೆ ಈ ಅನುದಾನ ಬಿಡುಗಡೆ ಮಾಡದೇ ಸತಾಯಿಸುತ್ತಿದೆ ಎಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಹೆಚ್ ಪದ್ಮಾ, ನರ್ಮದಾ, ಗಂಗಮ್ಮ, ಶಕುಂತಲಾ ಜಯಮ್ಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News