ರಾಯಚೂರು | ಮಾ.5ರಿಂದ ನವೋದಯ ಶಿಕ್ಷಣ ಸಂಸ್ಥೆಯಿಂದ ರಿಗೆಲ್-26 ವಾರ್ಷಿಕೋತ್ಸವ
ರಾಯಚೂರು: ನಗರದ ನವೋದಯ ಶಿಕ್ಷಣ ಸಂಸ್ಥೆಯಿಂದ ಮಾ.5ರಿಂದ 7ರ ವರೆಗೆ ರಿಗೆಲ್-26 ವಾರ್ಷಿಕೋತ್ಸವ ಹಾಗೂ ಇಫೋರಿಯಾ ಸಾಂಸ್ಕೃತಿಕ ಉತ್ಸವ ಆಯೋಜಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ರೆಡ್ಡಿ ಹೇಳಿದರು.
ಬುಧವಾರ ನವೋದಯ ಶಿಕ್ಷಣ ಸಂಸ್ಥೆಯ ಗ್ರಂಥಾಲಯ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.5ರ ಸಂಜೆ 6.30ಕ್ಕೆ ರಿಗೆಲ್ ಕಾರ್ಯಕ್ರಮವು ಕ್ಯಾಂಪಸ್‍ನ ಫುಡ್ ಕೋರ್ಟ್ ಬಳಿಯ ಬಯಲು ಮೈದಾನದಲ್ಲಿ ನಡೆಯಲಿದ್ದು, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಹನುಮಂತಪ್ಪ ಅವರು ಉದ್ಘಾಟಿಸಲಿದ್ದಾರೆ.
ಮಾ.6ರ ಬೆಳಿಗ್ಗೆ 10 ಗಂಟೆಗೆ ಸಂಸ್ಥೆಯ ಮುಖ್ಯ ಸಭಾಂಗಣದಲ್ಲಿ ವೈದ್ಯಕೀಯ, ದಂತ ಹಾಗೂ ಫಿಸಿಯೋಥೆರಪಿಸ್ಟ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ಸಂಸ್ಥೆಯ ಕುಲಪತಿ ಡಾ.ಭಗವಾನ್.ಬಿ.ಸಿ ಆಗಮಿಸಲಿದ್ದಾರೆ. ಸಂಜೆ 6ಕ್ಕೆ ಎಫೋರಿಯಾ ಸಾಂಸ್ಕೃತಿಕ ಉತ್ಸವ ನಡೆಯಲಿದ್ದು, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮಹೋಪಾತ್ರ ಆಗಮಿಸಲಿದ್ದಾರೆ ಎಂದು ಹೇಳಿದರು.
ಮಾ.7ರಂದು 10.45ಕ್ಕೆ ಫಾರ್ಮರ್ಸಿ, ನರ್ಸಿಂಗ್, ಅಲೈಡ್ ವೈದ್ಯಕೀಯ ವಿಜ್ಞಾನಗಳ ಶಿಕ್ಷಣ ಹಾಗೂ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪದವಿಯನ್ನು ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ)ಯ ನಿರ್ದೇಶಕ ಪ್ರೊ.ವೆಂಕಪ್ಪಯ್ಯ.ಆರ್.ದೇಸಾಯಿ ಅವರು ಪ್ರದಾನ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ಬೆಂಗಳೂರಿನ ಸೆಹೆರ್ ಬ್ಯಾಂಡ್ ವತಿಯಿಂದ ಸಂಗೀತ ಸಂಜೆ ಕಾರ್ಯಕ್ರಮ ಜರುಗಲಿದೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಮುಖರು, ಕಾಲೇಜಿನ ಭೋದಕ, ಬೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.