×
Ad

ರಾಯಚೂರು | ಪ್ರಥಮದರ್ಜೆ ಕಾಲೇಜಿನಲ್ಲಿ ಸಂಸ್ಕೃತ ಅಧ್ಯಯನ‌ ಕೆಂದ್ರ ಪ್ರಾರಂಭ : ಡಾ.ಯಂಕಣ್ಣ

Update: 2025-11-05 19:36 IST

ರಾಯಚೂರು: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಸ್ಕೃತ ಅಧ್ಯಯನ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದ್ದು, ಕೇಂದ್ರ ಸಂಸ್ಕೃತಿ ವಿಶ್ವವಿದ್ಯಾಲಯ ಅನುಮೋದನೆ ನೀಡಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಯಂಕಣ್ಣ ಹೇಳಿದರು.

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುಣಮಟ್ಟದ ಉನ್ನತ ಶಿಕ್ಷಣ ದೊರೆಯುತ್ತಿದ್ದು, ಎಂಎಸ್ಸಿಯಲ್ಲಿ ಐದು, ಎಂ.ಕಾಂನಲ್ಲಿ ಒಂದು ಮತ್ತು ಎಂಎನಲ್ಲಿ ಒಂದು ರ‍್ಯಾಂಕ್ ವಿದ್ಯಾರ್ಥಿಗಳು ಪಡೆದಿದ್ದಾರೆ ಎಂದು ಹೇಳಿದರು.

ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣದೊಂದಿಗೆ ಇತರೆ ಕೋರ್ಸಗಳ ಅಧ್ಯಯನಕ್ಕೆ ಕಾಲೇಜು ಒತ್ತು ನೀಡಿ ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳಲ್ಲಿ ಕೌಶಲ್ಯ ಆಧಾರಿತ ಕೋರ್ಸ್‌ಗಳನ್ನು ಪ್ರಾರಂಭಿಸಲು ಚಿಂತನೆ ನಡೆದಿರುವುದಾಗಿ ಹೇಳಿದರು.

ಕಾಲೇಜಿನ ಉಪನ್ಯಾಸಕ ಡಾ.ಪ್ರಾಣೇಶ ಕುಲ್ಕರ್ಣಿ ಮಾತನಾಡಿ, ರಾಜ್ಯದ 431 ಪದವಿ ಕಾಲೇಜುಗಳಲ್ಲಿ ಇಲ್ಲದೇ ಇರುವ ಸಂಸ್ಕೃತ ಅಧ್ಯಯನ ಕೇಂದ್ರ ನಗರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾರಂಭಿಸಲಾಗುತ್ತಿದೆ. 15 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಉಚಿತವಾಗಿ ಸಂಸ್ಕೃತ ಅಧ್ಯಯನ ಮಾಡಬಹುದು. ಪ್ರಮಾಣಪತ್ರದ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬೇಕಾಗುತ್ತದೆ. ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ ಅಧ್ಯಯನ ಕೇಂದ್ರವನ್ನು ಮಂಜೂರು ಮಾಡಿದೆ ಎಂದರು.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ಡಾ.ಮಹಾಂತೇಶ ಅಂಗಡಿ, ಸಂಸ್ಕೃತ ಉಪನ್ಯಾಸಕ ಚಂದನ್ ಬರುಮಾನ್, ಶ್ಯಾಮಸುಂದರ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News