×
Ad

ರಾಯಚೂರು | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2025-04-29 17:27 IST

ರಾಯಚೂರು : ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಿಂದ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು 2025-26ನೇ ಸಾಲಿನ ಪ್ರತಿಷ್ಠಿತ ಶಾಲೆಗಳಿಗೆ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಮೇ. 3ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಬಂದ ಅರ್ಜಿಗಳನ್ನು ಮೇ.5 ರಂದು ಪರಿಶೀಲನೆ ಮಾಡಲಾಗುವುದು. ಮೇ.9ರಂದು ಡಯಟ್ ಮೂಲಕ ಪ್ರವೇಶ ಪರೀಕ್ಷೆ, ಮೇ.13ರಂದು ಫಲಿತಾಂಶ ಪ್ರಕಟಿಸಲಾಗುವುದು. ಮೇ.17ರಂದು ಪರೀಕ್ಷೆಯಲ್ಲಿ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ ಕೌನ್ಸಲಿಂಗ್ ಮೂಲಕ ಶಾಲೆಗಳನ್ನು ಆಯ್ಕೆ ಮಾಡಿಕೊಂಡ ನಂತರ ಮೇ. 31ರಂದು ಶಾಲೆಗಳಿಗೆ ದಾಖಲಾಗುವುದಕ್ಕೆ ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು, ಹಾಸನ ಅಯ್ಯಂಗಾರ್ ಬೇಕರಿ ಹಿಂದುಗಡೆ ಕಲ್ಲೂರು ಕಾಲೋನಿ ರಾಯಚೂರು ಇಲ್ಲಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯನ್ನು ಪಡೆಯಬಹುದಾಗಿದೆ ಎಂದು ಪರಿಶಿಷ್ಟ ವರ್ಗಗಳ ರಾಯಚೂರು ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News