×
Ad

ರಾಯಚೂರು | ಕುರ್ಡಿ ಗ್ರಾಮದ ರಸ್ತೆ ದುರಸ್ತಿಗೆ ಎಸ್‌ಡಿಪಿಐ ಮನವಿ

Update: 2025-08-30 09:18 IST

ರಾಯಚೂರು: ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದಲ್ಲಿನ ರಸ್ತೆಗಳು ಹದಗೆಟ್ಟಿದ್ದು, ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದನ್ನು ದುರಸ್ತಿ ಪಡಿಸುವಂತೆ ಎಸ್ ಡಿಪಿಐ ಕುರ್ಡಿ ಶಾಖಾ ಸಮಿತಿಯಿಂದ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರಿಗೆ ಮನವಿ ಸಲ್ಲಿಸಲಾಯಿತು.

ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮವಾಗಿ ಗ್ರಾಮಸ್ಥರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ಇದರಿಂದ ಸ್ಥಳೀಯ ನಿವಾಸಿಗಳ ವಾಹನ ಚಾಲಕರು ಮತ್ತು ಪಾದಚಾರಿಗಳಿಗೆ ದೈನಂದಿನ ಸಂಚಾರದಲ್ಲಿ ಗಣನೀಯ ತೊಂದರೆಯಾಗುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ..

ರಸ್ತೆ ದುರಸ್ತಿಗೊಳಿಸದಿದ್ದಲ್ಲಿ ಗ್ರಾಮಸ್ಥರೊಂದಿಗೆ ರಸ್ತೆ ತಡೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿdfdAre.

ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಾದ ಮುಸ್ತಾಕ್ ಅಹ್ಮದ್, ಕೊರಡಿ ಶಾಖಾ ಅಧ್ಯಕ್ಷ ರಸೂಲ್, ಹುಸೇನ್ ಬಾಷಾ ಹಾಗೂ ಮೆಹಬೂಬ್ ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News