ರಾಯಚೂರು | ದ್ವಿತೀಯ ಪಿಯುಸಿ ಪರೀಕ್ಷೆ: ಮೊದಲದಿನವೇ 1,249 ವಿದ್ಯಾರ್ಥಿಗಳು ಗೈರು
Update: 2025-03-01 22:10 IST
ಸಾಂದರ್ಭಿಕ ಚಿತ್ರ
ರಾಯಚೂರು : ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಿತು. ಜಿಲ್ಲೆಯಾದ್ಯಂತ ನಡೆದ ಪರೀಕ್ಷೆಯಲ್ಲಿ ಒಟ್ಟು 1248 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ರಾಯಚೂರು, ಮಾನ್ವಿ, ಸಿಂಧನೂರು, ಲಿಂಗಸುಗೂರು, ದೇವದುರ್ಗ, ಮಸ್ಕಿ ಹಾಗೂ ಸಿರವಾರ ಸೇರಿದಂತೆ ಒಟ್ಟು 18,998 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಇದರಲ್ಲಿ 17,728 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. 1,248 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.