×
Ad

ರಾಯಚೂರು | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆಯ್ಕೆಪಟ್ಟಿ ಪ್ರಕಟ; ಆಕ್ಷೇಪಣೆಗೆ ಅರ್ಜಿ ಆಹ್ವಾನ

Update: 2025-02-25 15:35 IST

ರಾಯಚೂರು : ಜಿಲ್ಲೆಯ ಮಾನವಿ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ 2024-25ನೇ ಸಾಲಿಗೆ ಅಂಗನವಾಡಿ ಕಾರ್ಯಕರ್ತೆ-20, ಸಹಾಯಕಿಯರು-54 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮುಖಾಂತರ ಈಗಾಗಲೇ ಅರ್ಜಿಗಳನ್ನು ಅಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಜಿಲ್ಲಾ ಆಯ್ಕೆ ಸಮಿತಿಯು ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿದ್ದು, ಆಯ್ಕೆ ಪಟ್ಟಿಗೆ ಆಕ್ಷೇಪಣೆಗೆ ಅರ್ಜಿ ಆಹ್ವಾನಿಸಲಾಗಿದೆ.

ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆ ಅರ್ಜಿ ಸಲ್ಲಿಸುವವರು ಸೂಕ್ತ ದಾಖಲಾತಿಗಳೊಂದಿಗೆ ಮಾ.4ರ ಸಂಜೆ 5:30ರವರೆಗೆ ಸಲ್ಲಿಸಬಹುದಾಗಿದೆ. ಅಕ್ಷೇಪಣೆ ಸಲ್ಲಿಸುವವರು ಅಕ್ಷೇಪಣೆ ಅರ್ಜಿಯ ಜೊತೆಗೆ ಯಾವುದೇ ದಾಖಲಾತಿಗಳು ಸಲ್ಲಿಸದಿದ್ದಲ್ಲಿ ಅಂತಹವರ ಆಕ್ಷೇಪಣೆ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಾರ್ಯಾಲಯ ಮಾನವಿ ಅವರನ್ನು ಸಂಪರ್ಕ ಮಾಡಬಹುದಾಗಿದೆ ಎಂದು ಮಾನವಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News