×
Ad

ರಾಯಚೂರು | ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ಆಯ್ಕೆ

Update: 2025-09-04 18:50 IST

ರಾಯಚೂರು : 2025-26ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಆಯ್ಕೆ ಮಾಡಲಾಗುತ್ತಿದೆ.

ನಾಗಪುರ ದೀಕ್ಷಾಭೂಮಿಗೆ ಯಾತ್ರೆ ಕೈಗೊಳ್ಳಲು ಸಮಾಜ ಕಲ್ಯಾಣ ಇಲಾಖೆಯಿಂದ ಬಸ್ಸು ಮತ್ತು ರೈಲಿನ ವ್ಯವಸ್ಥೆ ಮಾಡಲಾಗುತ್ತದೆ. ದಿಕ್ಷಾಭೂಮಿಗೆ ಭೇಟಿ ನೀಡುವ ಅನುಯಾಯಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ ವಿಳಾಸ: https://swd.karnataka.gov.in/website ನಲ್ಲಿ ಸೆ.9ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ರಾಯಚೂರು ಸಹಾಯಕ ನಿರ್ದೇಶಕರ ಕಚೇರಿ ಮೊ:9480843184, ಮಾನ್ವಿ ಸಹಾಯಕ ನಿರ್ದೇಶಕರ ಕಚೇರಿ ಮೊ: 9480843183, ಲಿಂಗಸೂರು ಸಹಾಯಕ ನಿರ್ದೇಶಕರ ಕಚೇರಿ ಮೊ: 9480843182, ದೇವದುರ್ಗ ಸಹಾಯಕ ನಿರ್ದೇಶಕರ ಕಚೇರಿ 9480843181, ಮತ್ತು ಸಿಂಧನೂರ ಸಹಾಯಕ ನಿರ್ದೇಶಕರ ಕಚೇರಿ ಮೊ. 9480843185 ಇವರಿಗೆ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸಿಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News