×
Ad

ರಾಯಚೂರು | ಸ್ವ-ಸಹಾಯ ಸಂಘದ ಸದಸ್ಯರು ಉತ್ತಮವಾಗಿ ಕಾರ್ಯನಿರ್ವಹಿಸಿ: ಸಾಜೀದ್ ಸಮೀರ್

Update: 2025-07-23 22:07 IST

ರಾಯಚೂರು: ಮಹಾನಗರ ಪಾಲಿಕೆಯೊಂದಿಗೆ ಉದ್ದೇಶಿತ ಸ್ವ ಸಹಾಯ ಸಂಘಗಳು ಚಟುವಟಿಕೆಗಳ ಬಗ್ಗೆ ಒಡಂಬಡಿಕೆಯಂತೆ ಮಹಾನಗರ ಪಾಲಿಕೆಯಿಂದ ನಿಗದಿಪಡಿಸಲಾದ ಕರ ವಸೂಲಿಯ ಗುರಿ ಸಾಧನೆಗೆ ಶ್ರಮಿಸಬೇಕು. ಪಾಲಿಕೆಯ ಅಭಿವೃದ್ಧಿಯಲ್ಲಿ ಸ್ವ-ಸಹಾಯ ಸಂಘದ ಸದಸ್ಯರ ಪಾತ್ರ ಮಹತ್ವ ಪಡೆದುಕೊಳ್ಳಲಿ ಎಂದು ರಾಯಚೂರು ಮಹಾನಗರ ಪಾಲಿಕೆಯ ಪ್ರಭಾರ ಅಧ್ಯಕ್ಷ ಸಾಜೀದ್ ಸಮೀರ್ ಅವರು ಹೇಳಿದರು.

ಜು.23ರ ಬುಧವಾರ ದಂದು ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ, ಸಮರ್ಪಕ ವಸೂಲಾತಿಗಾಗಿ ಸಮಿತಿಯ ಮೂಲಕ ಆಯ್ಕೆ ಮಾಡಿದ 25 ಸದಸ್ಯರಿಗೆ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಬಹಳಷ್ಟು ಕಾರ್ಯಗಳು ನಡೆಯುತ್ತಿವೆ. ಅಧಿಕಾರಿಗಳು ಮತ್ತು ಸಿಬ್ಬಂದಿಯ ಮಾರ್ಗದರ್ಶನದಲ್ಲಿ ಸ್ವ-ಸಹಾಯ ಸಂಘದ ಸದಸ್ಯರು ಕಾರ್ಯ ನಿರ್ವಹಿಸಬೇಕು. ಪಾಲಿಕೆಯ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದರು.

ಈ ವೇಳೆ ಪಾಲಿಕೆಯ ಆಯುಕ್ತರಾದ ಜುಬೀನ್ ಮೊಹಪಾತ್ರ ಅವರು ಮಾತನಾಡಿ, ಸ್ವ-ಸಹಾಯ ಸಂಘದ ಸದಸ್ಯರು ಕರ ವಸೂಲಾತಿಯ ಬಗ್ಗೆ ಸಂಬಂಧಪಟ್ಟ ಕಂದಾಯ ಶಾಖೆಯ ಅಧಿಕಾರಿ ಅಥವಾ ಸಿಬ್ಬಂದಿಗೆ ವರದಿ ಸಲ್ಲಿಸಬೇಕು. ಕ್ಷೇತ್ರದಲ್ಲಿ ಯಾವುದೇ ಅಡೆತಡೆ ಅಥವಾ ತೊಂದರೆಗಳು ಕಂಡುಬಂದಲ್ಲಿ ಮಹಾನಗರ ಪಾಲಿಕೆಯ ಸಂಬಂಧಪಟ್ಟ ಕಂದಾಯ ಶಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕೆಂದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಡಳಿತ ಉಪ ಆಯುಕ್ತರಾದ ಸಂತೋಷ ರಾಣಿ, ಮಹಾನಗರ ಪಾಲಿಕೆ ಸಮುದಾಯ ಸಂಘಟನಾಧಿಕಾರಿ ಕೃಷ್ಣ ಕಟ್ಟಿಮನಿ ಸೇರಿದಂತೆ 14 ಸ್ವ-ಸಹಾಯ ಸಂಘದ 25 ಸದಸ್ಯರು ಇದ್ದರು. ಇದಕ್ಕೂ ಮುಂಚೆ ಸ್ವ-ಸಹಾಯ ಸಂಘದ ಸದಸ್ಯರಿಂದ ಅಧ್ಯಕ್ಷರಿಗೆ ಆಯುಕ್ತರಿಗೆ ಹಾಗೂ ಉಪ ಆಯುಕ್ತರಿಗೆ ಸನ್ಮಾನ ಮಾಡಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News