ರಾಯಚೂರು | ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದ ಕಿರು ಪುಸ್ತಕ, ಮೈಕ್ರೋ ಝೆರಾಕ್ಸ್ ಮಾರಾಟ ನಿಷೇಧ
ಸಾಂದರ್ಭಿಕ ಚಿತ್ರ
ರಾಯಚೂರು : ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಕಿರು ಪುಸ್ತಕಗಳು ಹಾಗೂ ಮೈಕ್ರೋ ಝೆರಾಕ್ಸ್ ಗಳ ಮಾರಾಟ ಮಾಡುವುದು, ಖರೀದಿ ಮಾಡುವುದು ಹಾಗೂ ಶಾಲಾ ಆವರಣದಲ್ಲಿ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ
ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, ಕಲಬುರಗಿ ವಿಭಾಗ, ಕಲಬುರಗಿ ಇವರ ಸುತ್ತೋಲೆ ಹಿನ್ನೆಲೆಯಲ್ಲಿಈ ಕ್ರಮ ವಹಿಸಲಾಗಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಅತ್ಯಂತ ಪ್ರಮುಖ ಘಟ್ಟವಾದ ಎಸೆಸೆಲ್ಸಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿ/ಪೋಷಕರು ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.