ರಾಯಚೂರು | ಶ್ರೀ ಅಂಬಾದೇವಿ ಜಾತ್ರೆ; ಪ್ರಾಣಿ ಬಲಿ ನಿಷೇಧ : ಡಿಸಿ ನಿತೀಶ್ ಕೆ.
ನಿತೀಶ್ ಕೆ.
ಲಿಂಗಸುಗೂರು: ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸೋಮಲಾಪೂರು ಗ್ರಾಮದಲ್ಲಿ 2026ರ ಜ.2ರಿಂದ 8ರವರೆಗೆ ನಡೆಯಲಿರುವ ಶ್ರೀ ಅಂಬಾದೇವಿ ಜಾತ್ರೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮಹತ್ವದ ಆದೇಶ ಹೊರಡಿಸಲಾಗಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಿತೀಶ್ ಕೆ. ಅವರು, ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆಯಡಿ, ಜಾತ್ರೆ ನಡೆಯುವ ಅವಧಿಯಲ್ಲಿ ದೇವಾಲಯದ ಆವರಣದಲ್ಲಿ ಅಥವಾ ಸೋಮಲಾಪೂರು ಗ್ರಾಮದ ಸಾರ್ವಜನಿಕ ವ್ಯಾಪ್ತಿಯಲ್ಲಿ ಭಕ್ತಾಧಿಗಳು ಹಾಗೂ ಸಾರ್ವಜನಿಕರು ದೇವರ ಹೆಸರಿನಲ್ಲಿ ಯಾವುದೇ ರೀತಿಯ ಪ್ರಾಣಿ ಅಥವಾ ಪಕ್ಷಿ ಬಲಿ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಜಾತ್ರೆಯ ಸಂದರ್ಭದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಈ ನಿರ್ಬಂಧ ವಿಧಿಸಲಾಗಿದ್ದು, ಆದೇಶ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.