ರಾಯಚೂರು: ಜೂನ್ 6 ರಂದು ಬೀದಿ ಬದಿ ವ್ಯಾಪಾರಸ್ಥರ ಸಮಾವೇಶ
ರಾಯಚೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ವ್ಯಾಪಾರ ಕೇಂದ್ರ ಸ್ಥಾಪಿಸಬೇಕು ಹಾಗೂ ಬೀದಿ ಬದಿಯ ವ್ಯಾಪಾರಸ್ಥರ ಸೌಲಭ್ಯ ನ್ಯಾಯಯುತವಾಗಿ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶದ ಕಾಂಗ್ರೆಸ್ ಸಮಿತಿಯಿಂದ ಜೂನ್ 6 ರಂದು ಕಲ್ಯಾಣ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘದ ಸಮಾವೇಶ ಆಯೋಜಿಸಲಾಗಿದೆ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘದ ಜಿಲ್ಲಾಧ್ಯಕ್ಷ ಯೇಸುಮಿತ್ರ ಹೇಳಿದರು.
ಅವರು ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಕೇಂದ್ರ ಸ್ಥಾಪಿಸುವದು ಸೇರಿದಂತೆ 10 ಪ್ರಮುಖ ಬೇಡಿಕೆಗಳಿಗೆ ಆಗ್ರಹಿಸಿ ಸಮಾವೇಶ ಮಾಡಿ ಸರ್ಕಾರ ಗಮನಸೆಳೆಯಲು ಆಯೋಜಿಸಲಾಗುವುದು. ಏಳು ಜಿಲ್ಲೆಗಳ ಸರಿಸುಮಾರು 3 ಸಾವಿರ ಬೀದಿಬದಿ ವ್ಯಾಪಾರಿಗಳು ಭಾಗವಹಿಸುವ ನಿರೀಕ್ಷೆಯಿದೆ. ಸಮಾವೇಶವನ್ನು ನೂತನ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಶಾಸಕರುಗಳು ಸೇರಿದಂತೆ ಮಹಾನಗರ ಪಾಲಿಕೆ ಆಯುಕ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀನಿವಾಸ ಕಲವಲದೊಡ್ಡಿ,ಶಂಶುದ್ದೀನ್ ಮತ್ತಿತರರು ಇದ್ದರು.