×
Ad

ರಾಯಚೂರು | ನರೇಗಾ ಯೋಜನೆಯ ಅನುಷ್ಠಾನಕ್ಕೆ ಕ್ರಮವಹಿಸಿ : ರಾಹುಲ್ ಪಾಂಡ್ವೆ

Update: 2025-06-05 18:21 IST

ರಾಯಚೂರು : ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ಕೊಡಬೇಕು. ಈ ಬಗ್ಗೆ ನಿರ್ಲಕ್ಷ್ಯ ವಹಿಸಿ, ಕಾರ್ಯನಿರ್ವಹಣೆಯಲ್ಲಿ ವಿಫಲರಾದಲ್ಲಿ ಅಂತವರ ವಿರುದ್ಧ ತಾಲ್ಲೂಕು ಅಡ್-ಹಾಕ್ ಸಮಿತಿಗಳು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅವರು ಹೇಳಿದರು.

ರಾಯಚೂರು ಜಿಲ್ಲಾ ಪಂಚಾಯತ್ ಕಚೇರಿಯ ಸಭಾ ಭವನದಲ್ಲಿ ಜೂ.4ರಂದು ನಡೆದ ನರೇಗಾ ಯೋಜನೆಯ ಅಡ್-ಹಾಕ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗಾಗಲೇ ಮಳೆಗಾಲ ಪ್ರಾರಂಭವಾಗಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಶುದ್ಧ ಕುಡಿಯುವ ನೀರಿನ ಘಟಕಗಳು ಚಾಲ್ತಿಯಲ್ಲಿರಬೇಕು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ದುರಸ್ಥಿ ಅಗತ್ಯವಿದೆ ಎಂದು ಕಂಡು ಬಂದಲ್ಲಿ ಕೂಡಲೇ ಕ್ರಮವಹಿಸಬೇಕು ಎಂದ ಅವರು, ಮಳೆಗಾಲದಲ್ಲಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ಕಾಪಾಡಲು ಪಿಡಿಓ ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

2024-25ನೇ ಸಾಲಿನಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳಿಗೆ ಸಾಮಾಜಿಕ ಲೆಕ್ಕ ಪರಿಶೋಧನೆ ಕಾರ್ಯವು ಜೂ.2 ರಿಂದ ಪ್ರಾರಂಭವಾಗಿದ್ದು, ಸಾಮಾಜಿಕ ಪರಿಶೋಧನೆ ತಂಡವು ಆ ದಿನವೇ ನರೇಗಾ ಮತ್ತು 15ನೇ ಹಣಕಾಸು ಕಾಮಗಾರಿಗಳ ಕಡತಗಳು ಹಾಗೂ ಎಲ್ಲಾ ದಾಖಲಾತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದು ಸೂಚಿಸಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಶರಣಬಸವರಾಜ ಕೆಸರಟ್ಟಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ), ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು, ಎಡಿಪಿಸಿ, ಸಾಮಾಜಿಕ ಪರಿಶೋಧನೆ ಡಿ.ಪಿ.ಎಮ್, ತಾಂತ್ರಿಕ ಸಂಯೋಜಕರು ಹಾಗೂ ಇನ್ನಿತರ ಸಿಬ್ಬಂದಿ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News