ರಾಯಚೂರು | ಮುನ್ನೂರು ಕಾಪು ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ರಾಯಚೂರು: ಮುನ್ನೂರು ಕಾಪು ಸಮಾಜದ ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಶೈಕ್ಷಣಿಕ ಚಟುವಟಿಕೆಯಲ್ಲಿ ತಮ್ಮನು ತಾವು ತೊಡಗಿಸಿಕೊಂಡು ಸಮಾಜದಲ್ಲಿ ಉನ್ನತ ನಾಗರೀಕರಾಗಿ ಸಮಾಜ ಸೇವೆಯ ಮೂಲಕ ಸಮಾಜಕ್ಕೆ ಕೀರ್ತಿ ತರಬೇಕು ಎಂದು ಮುನ್ನೂರುಕಾಪು ಸಮಾಜದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ. ಪಾಪಾರೆಡ್ಡಿ ಅವರು ಕರೆ ನೀಡಿದರು.
ನಗರದ ವೀರಾಂಜನೇಯ ಮುನ್ನೂರು ಕಾಪು ಕಲ್ಯಾಣ ಮಂಟಪದಲ್ಲಿ ಸಮಾಜದ ವತಿಯಿಂದ ಶನಿವಾರ ಆಯೋಜಿಸಿದ್ದ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜದ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿರುವುದು ಶ್ಲಾಘನೀಯ. ಮುನ್ನೂರು ಕಾಪು ಸಮಾಜ ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಅಭಿವೃದ್ಧಿಯತ್ತ ಸಾಗುತ್ತಿದೆ. ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ 12ವರ್ಷ ಕಳೆದಿವೆ. ಸಮಾಜದ ವಿದ್ಯಾರ್ಥಿಗಳು ಎಂಬಿಬಿಎಸ್ ವಿದ್ಯಾರ್ಜನೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಮುನ್ನೂರುಕಾಪು ಸಮಾಜದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಸಮಾಜವು ಕೃಷಿ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿವಹಿಸಿ ಅಭಿವೃದ್ಧಿಯತ್ತ ಸಾಗುತ್ತಿದೆ. ವಿದ್ಯಾರ್ಥಿಗಳು ಕೆಎಎಸ್, ಐಎಎಸ್ ನಂತಹ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸುವ ನಿಟ್ಟಿನಲ್ಲಿ ಆಸಕ್ತಿ ವಹಿಸಬೇಕು ಎಂದು ತಿಳಿಸಿದರು.
ಸಮಾಜದ ಯುವಕರಲ್ಲಿ ಶಿಕ್ಷಣದ ಆಸಕ್ತಿ ಹೆಚ್ಚಿಸುವುದು ಮತ್ತು ಸಮಾಜ ಸೇವೆಯೇ ಈ ಪ್ರತಿಭಾ ಪುರಸ್ಕಾರ ಮುಖ್ಯ ಉದ್ದೇಶವಾಗಿದೆ. ಮುನ್ನೂರುಕಾಪು ಸಮಾಜದ ಯುವಕರು ಹೊರ ದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮುನ್ನೂರುಕಾಪು ಸಮಾಜ ಇತರೇ ಸಮಾಜಗಳಿಗೆ ಮಾದರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮಹಾನಗರ ಪಾಲಿಕೆ ಮಹಾಪೌರರು ಡಾ.ಸಾಜೀದ್ ಸಮೀರ್ ಅವರು ಮಾತನಾಡಿ, ಮುನ್ನೂರು ಕಾಪು ಸಮಾಜದ ಶಿಕ್ಷಣ ಸಂಸ್ಥೆಯ ಮೂಲಕ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಮೂಲಕ ಉತ್ತಮ ಕೆಲಸ ಮಾಡುತ್ತಿರುವುದು ಕಾರ್ಯ ಶ್ಲಾಘನೀಯ. ಪಾಪಾರೆಡ್ಡಿ ನಾಯಕತ್ವದಲ್ಲಿ ಮುನ್ನೂರು ಕಾಪು ಸಮಾಜ ಬಲಿಷ್ಠ ಸಮಾಜವನ್ನಾಗಿ ಗುರುತಿಸಿಕೊಂಡಿದೆ. ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಹೇಳಿದರು.
ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಜೊತೆಗೆ 2000 ರೂ. ಹಾಗೂ ಬೆಳ್ಳಿ ಪದಕವನ್ನು ಮಾಜಿ ಶಾಸ ಎ.ಪಾಪರೆಡ್ಡಿ ಅವರು ನೀಡಿದರು.
ಸಾನಿಧ್ಯವನ್ನು ಸೋಮವಾರಪೇಟೆ ಅಭಿನವ ರಾಚೋಟಿ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು.ಕಾಂಗ್ರೆಸ್ ಯುವ ಮುಖಂಡ ರವಿ ಬೋಸರಾಜು ಅವರು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಮಾಜದ ಮುಖಂಡರಾದ ಬೆಲ್ಲಂ ನರಸರೆಡ್ಡಿ, ಯು.ಕೃಷ್ಣಮೂರ್ತಿ,ಲಿಂಗರೆಡ್ಡಿ, ಯು.ಲಕ್ಸ್ಮಿರೆಡ್ಡಿ, ಬಂಗಿ ನರಸರೆಡ್ಡಿ, ಕುಕ್ಕಲ ನರಸಿಂಹಲು, ಫಕೀರಪ್ಪ ನರಸರೆಡ್ಡಿ, ಜಿ.ಶೇಖರರೆಡ್ಡಿ, ಗುಂತಲ ತಿಮ್ಮರೆಡ್ಡಿ, ನಿಂಬೆಕಾಯಿ ಭೀಮರೆಡ್ಡಿ, ಬಾಯಿಕಾಡ್ ಶೇಖರ್‍ರೆಡ್ಡಿ, ಪೆÇಗಲ್ ಶ್ರೀನಿವಾಸರೆಡ್ಡಿ, ನಯನ್ ಶ್ರೀನಿವಾಸ್ ರೆಡ್ಡಿ, ಸುಗನ್‍ಗಾರ್ ಜನಾರ್ದನ ರೆಡ್ಡಿ, ಬುಜ್ಜನ್ ಗಾರ್ ತಿಮ್ಮರೆಡ್ಡಿ, ಪುಂಡ್ಲ ರಾಜೇಂದ್ರರೆಡ್ಡಿ, ರೇಖಾ ಮಹೇಂದ್ರರೆಡ್ಡಿ, ಮೀನಾಕ್ಷಿ ಎನ್ ಶ್ರೀನಿವಾಸ್‍ರೆಡ್ಡಿ, ಬಂಗಿ ಮುನಿರೆಡ್ಡಿ, ವಿದ್ಯಾರ್ಥಿಗಳುಸೇರಿದಂತೆ ಮುನ್ನೂರು ಕಾಪು ಸಮಾಜ ಮುಖಂಡರು ಸೇರಿದಂತೆ ಉಪಸ್ಥಿತರಿದ್ದರು.