ರಾಯಚೂರು | ಬೈಕ್‌ಗೆ ಟಾಟಾ ಏಸ್ ಢಿಕ್ಕಿ; ಸವಾರ ಮೃತ್ಯು, ನಾಲ್ವರಿಗೆ ಗಾಯ
Update: 2025-08-03 20:20 IST
ರಾಯಚೂರು: ಟಾಟಾ ಏಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಮುದಬಾಳ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಬೈಕ್ ಸವಾರ ವಿಜಯಾನಂದ ( 22) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ 108 ಆರೋಗ್ಯ ಕವಚ ಆಂಬ್ಯುಲೆನ್ಸ್ ಸಿಬ್ಬಂದಿ ಆಗಮಿಸಿ ತುರ್ತು ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಅವರನ್ನು ಲಿಂಗಸುಗೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.