×
Ad

ರಾಯಚೂರು | ಸೆ.6ರಂದು ಶಿಕ್ಷಕರ ದಿನಾಚರಣೆ

ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Update: 2025-09-04 18:48 IST

ರಾಯಚೂರು : ಶಾಲಾ ಶಿಕ್ಷಣ ಇಲಾಖೆಯಿಂದ 2025-26ನೇ ಸಾಲಿನ ರಾಯಚೂರು ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವು ಸೆ.6ರ ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರ ಹಮ್ಮಿಕೊಳ್ಳಲಾಗಿದ್ದು. ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಲಾಗಿದೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗ: ಈ ವಿಭಾಗದಲ್ಲಿ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಉಮ್ಮಿ ಸಲ್ಮಾ, ದೇವದುರ್ಗದ ದರ್ಬಾರ ಓಣಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಗೋವಿಂದರಾಜ, ಲಿಂಗಸೂಗುರು ತಾಲೂಕಿನ ಹುಲಿಗುಡ್ಡ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾದ ಶಿವಯೋಗಿ ಗುಂಜುಟಗಿ, ಮಾನವಿ ತಾಲೂಕಿನ ಲಕ್ಕಂದಿನ್ನಿ ಗ್ರಾಮದ ಅಂಬೇಡ್ಕರನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಗುರುಮೂರ್ತಿ ಎಂ.ಜಿ., ರಾಯಚೂರು ತಾಲೂಕಿನ ಕೊರತೀಪ್ಲಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಸುಖಲತಾ ಅವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹಿರಿಯ ಪ್ರಾಥಮಿಕ ಶಾಲಾ ವಿಭಾಗ: ಈ ವಿಭಾಗದಲ್ಲಿ ಲಿಂಗಸೂಗೂರು ತಾಲೂಕಿನ ಹೂವಿನಬಾವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಅಮರೇಗೌಡ ಮಾಲಿಪಾಟೀಲ, ಮಾನವಿ ತಾಲೂಕಿನ ಕವಿತಾಳ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಹಲಿಯಾಬೇಗಂ, ಮಾನವಿ ತಾಲೂಕಿನ ರಾಜೋಳ್ಳಿ ಗ್ರಾಮದ ಸರ್ಕಾರಿ ಉನ್ನತೀಕರಿಸದ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಅನ್ವರ್‌, ಸಿಂಧನೂರು ತಾಲೂಕಿನ ಚನ್ನಳ್ಳಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಮುಖ್ಯೋಪಾಧ್ಯಾಯರಾದ ಅನಂತರಾವ್, ರಾಯಚೂರು ತಾಲೂಕಿನ ಯಕ್ಲಾಸಪೂರಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನರಸುಬಾಯಿ ಅವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ವಿಭಾಗ : ಈ ವಿಭಾಗದಲ್ಲಿ ದೇವದುರ್ಗ ತಾಲೂಕಿನ ಗಾಣಧಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ಗೋವಿಂದ, ಲಿಂಗಸುಗೂರು ತಾಲೂಕಿನ ಮುದಗಲ್ ಗ್ರಾಮದ ಬಾಲಕಿಯರ ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರಾದ ಅಮರೇಗೌಡ ಅಗಸಿಮುಂದಿನ, ಮಾನವಿ ತಾಲೂಕಿನ ಕೋನಾಪೂರಪೇಟ ಗ್ರಾಮದ ಸರಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ಸಂಜೀವಪ್ಪ ಕೆ., ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರಾದ ನಾಗಪ್ಪ, ರಾಯಚೂರು ತಾಲೂಕಿನ ಗುಂಜಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕಿ ರಾಧಾ ಕೆ. ಅವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಆಯ್ಕೆಯಾದ ಎಲ್ಲ ಶಿಕ್ಷಕರಿಗೆ ವಿವಿಧ ಗಣ್ಯರಿಂದ ಸನ್ಮಾನಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News