×
Ad

ರಾಯಚೂರು | ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲು

Update: 2025-07-13 08:37 IST

ರಾಯಚೂರು: ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಹಾಸನದಿಂದ ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆಯಾಗಿದ್ದು, ಕಣ್ಮರೆಯಾದವರನ್ನು ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು ಗುರುತಿಸಲಾಗಿದೆ.

ಮೂವರು ಯುವಕರು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಬಂದಿದ್ದರು. ಈ ವೇಳೆ ಯುವಕರು ತುಂಗಭದ್ರಾ ನದಿಯಲ್ಲಿ ಈಜಲು ಹೋದಾಗ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರು ಹಾಗೂ ಈಜುಗಾರರ ತಂಡ ಯುವಕರಿಗಾಗಿ ಶೋಧಕಾರ್ಯ ನಡೆಸಿದ್ದು, ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News