Raichur | ಟಿಪ್ಪರ್–ಕಾರು ಢಿಕ್ಕಿ : ತಪ್ಪಿದ ಅನಾಹುತ
Update: 2026-07-12 17:46 IST
ರಾಯಚೂರು: ತಾಲೂಕಿನ ಬಾಯಿದೊಡ್ಡಿ ಕ್ರಾಸ್ ಸಮೀಪದ ಪೆಟ್ರೋಲ್ ಬಂಕ್ ಎದುರು ಟಿಪ್ಪರ್ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರಾಯಚೂರಿನಿಂದ ನೆರೆಯ ತೆಲಂಗಾಣದ ಗದ್ವಾಲ್ ಜಿಲ್ಲೆಯತ್ತ ತೆರಳುತ್ತಿದ್ದ ಕಾರಿಗೆ, ಹೊಲದಿಂದ ಮಣ್ಣು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಈ ಸಂಬಂಧ ಇನ್ನೂ ಯಾವುದೇ ಪೊಲೀಸ್ ಪ್ರಕರಣ ದಾಖಲಾಗಿಲ್ಲ.