×
Ad

ರಾಯಚೂರು | ಟಿಪ್ಪರ್–ಬೈಕ್ ಮುಖಾಮುಖಿ ಢಿಕ್ಕಿ: ಯುವಕ ಸ್ಥಳದಲ್ಲೇ ಮೃತ್ಯು

Update: 2026-02-03 18:22 IST

ಸಾಂದರ್ಭಿಕ ಚಿತ್ರ

ರಾಯಚೂರು : ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಸಮೀಪ ನಡೆದಿದೆ.

ಮೃತರನ್ನು ಚಡಕಲ್ ಗುಡ್ಡ ಗ್ರಾಮದ ನಿವಾಸಿ ಬಸವರಾಜ್ (32) ಎಂದು ಗುರುತಿಸಲಾಗಿದೆ.

ಮೃತ ಬಸವರಾಜ್ ಅವರು ಸಿರವಾರದಿಂದ ಪಾಮನಕಲ್ಲೂರಿಗೆ ತಮ್ಮ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಲಿಂಗಸುಗೂರಿನಿಂದ ರಾಯಚೂರು ಕಡೆಗೆ ಹೊರಟಿದ್ದ ಟಿಪ್ಪರ್ ಎದುರಿನಿಂದ ಬಂದು ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಬಸವರಾಜ್ ರಸ್ತೆ ಮೇಲೆ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಟಿಪ್ಪರ್ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಅಪಘಾತದ ಬಳಿಕ ಚಾಲಕ ಟಿಪ್ಪರ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು  ತಿಳಿದುಬಂದಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - Reshma

contributor

Similar News