×
Ad

ರಾಯಚೂರು | ದ್ವಿಚಕ್ರವಾಹನಗಳೆರಡು ಮುಖಾಮುಖಿ ಢಿಕ್ಕಿ : ಇಬ್ಬರು ಮೃತ್ಯು

Update: 2025-11-14 23:44 IST

ರಾಯಚೂರು : ದ್ವಿಚಕ್ರವಾಹನಗಳೆರಡು ಮುಖಾಮುಖಿ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು,  ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಿಂಗಸೂಗೂರು ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.  

ಪ್ರೀತಮ್ (18), ಸಿದ್ದಯ್ಯ ಸ್ವಾಮಿ ಯರಡೋಣಿ (39)ಮೃತರು. ಅಪಘಾತದಲ್ಲಿ ಪ್ರೀತಮ್ ಸ್ಥಳದಲ್ಲೇ ಮೃತಪಟ್ಟರೆ, ಸಿದ್ದಯ್ಯ ಸ್ವಾಮಿ ಯರಡೋಣಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.  

ಸಿದ್ದಯ್ಯ ಸ್ವಾಮಿ ಹಾಗೂ ಆನಂದ ಪತ್ತಾರ್ ಎಂಬವರು ಕೆಲಸದ ನಿಮಿತ್ತ ಬೈಕ್‌ನಲ್ಲಿ ಪಟ್ಟಣದ ಹೊರವಲಯಕ್ಕೆ ತೆರಳುತ್ತಿದ್ದಾಗ ಲಿಂಗಸೂಗೂರು ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ಎದುರಿನಿಂದ ಬಂದ ಬೈಕ್‌ ಢಿಕ್ಕಿ ಹೊಡೆದಿದೆ. ಕೂಡಲೇ, ಸ್ಥಳೀಯರು ಗಾಯಾಳುಗಳನ್ನು ಲಿಂಗಸೂಗೂರು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. 

ಈ ಬಗ್ಗೆ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News