ರಾಯಚೂರು | ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಇರಿತ : ಓರ್ವ ಮೃತ್ಯು
Update: 2025-05-05 18:54 IST
ರಾಯಚೂರು : ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಇಬ್ಬರಿಗೆ ಚಾಕು ಇರಿದು, ಓರ್ವ ಮೃತಪಟ್ಟಿರುವ ಘಟನೆ ನಗರದ ಸಿಯತಲಾಬ್ ಬಡಾವಣೆಯಲ್ಲಿ ನಡೆದಿದೆ.
ಮೃತನನ್ನು ಓಂ ಸಿಂಗ್ ಎಂದು ಗುರುತಿಸಲಾಗಿದೆ.
ಸಫಾಯಿ ಕರ್ಮಚಾರಿಗಳ ಸಮುದಾಯದ ಶಿವ, ರಮೇಶ, ಓಂಸಿಂಗ್ ಸೇರಿದಂತೆ ನಾಲ್ಕೈದು ಜನರು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದರು. ಮಾತಿಗೆ ಮಾತು ಬೆಳದು ಓಂ ಸಿಂಗ್ ಹಾಗೂ ಇನ್ನೊಬ್ಬನ ಮೇಲೆ ಚಾಕುವಿನಿಂದ ಇರಿದಿದ್ದಾರೆ. ತೀವ್ರ ಗಾಯಗೊಂಡ ಓಂಸಿಂಗ್ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಸದರ್ ಬಜಾರ್ ಠಾಣೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತೀವ್ರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.