×
Ad

ರಾಯಚೂರು | ಜಾನುವಾರುಗಳಿಗೆ ಲಸಿಕೆ ಹಾಕಿಸಿ, ಆರ್ಥಿಕ ನಷ್ಟ ತಪ್ಪಿಸಿ : ಅಪರ ಜಿಲ್ಲಾಧಿಕಾರಿ ಶಿವಾನಂದ

Update: 2025-11-04 16:41 IST

ರಾಯಚೂರು  : ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ ಪೋಲಿಯೋ ಲಸಿಕೆಯ ಮಾದರಿಯಲ್ಲಿ ಎಲ್ಲಾ ಹಳ್ಳಿಗಳಲ್ಲಿ ಲಸಿಕೆ ಅಭಿಯಾನ ನಡೆಸಬೇಕು. ರೈತ ಬಾಂಧವರು ತಮ್ಮಲ್ಲಿರುವ ಎಲ್ಲಾ ದನ, ಎಮ್ಮೆ ಮತ್ತು 3 ತಿಂಗಳ ಮೇಲ್ಪಟ್ಟ ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸಿ ಸಾಂಕ್ರಾಮಿಕ ರೋಗದಿಂದಾಗುವ ಆರ್ಥಿಕ ನಷ್ಟ ತಪ್ಪಿಸಬೇಕು. ಈ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಭಜಂತ್ರಿ ಅವರು ಹೇಳಿದರು.

ನ.3ರ ಸೋಮವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 8ನೇ ಸುತ್ತಿನ ಕಾಲು ಬಾಯಿ ರೋಗದ ಉಚಿತ ಸಾಮೂಹಿಕ ಲಸಿಕಾ ಕಾರ್ಯಕ್ರಮಕ್ಕೆ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೆಶಕರಾದ ಡಾ.ಪೋಮ್ ಸಿಂಗ್, ವಿ.ವೈ.ವಾಲ್ಮೀಕಿ ಸೇರಿದಂತೆ ಇತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News