Raichur | ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ವಿವಿಧ ಕ್ರೀಡಾಕೂಟ
ರಾಯಚೂರು: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಸೆ. 29ರಂದು ಜಿಲ್ಲಾ ಮಹಾತ್ಮ ಗಾಂಧೀಜಿ ಕ್ರೀಡಾಂಗಣದ ಆವರಣದಲ್ಲಿ ಹಿರಿಯ ನಾಗರಿಕರಿಗಾಗಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕ್ಯಾರಂ ಹಾಗೂ ಚೆಸ್ ಸ್ಪರ್ಧೆಗಳು ನಡೆದಿದ್ದು, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಡಾ. ಭಾಸ್ಕರ್ ಬಾಬು ಅವರು ಸ್ಪರ್ಧೆಗಳ ನಿರ್ಣಾಯಕರಾಗಿ ಕಾರ್ಯನಿರ್ವಹಿಸಿದರು.
ಕ್ರೀಡಾಕೂಟವನ್ನು ರಾಯಚೂರು ತಾಲೂಕು ಪಂಚ ಗ್ಯಾರಂಟಿ ಅಧ್ಯಕ್ಷ ಪವನ್ ಕಿಶೋರ್ ಪಾಟೀಲ್ ಹಾಗೂ ಸಂತೋಷ್ ಕುಮಾರ್ ಉದ್ಘಾಟಿಸಿದರು. ಹಿರಿಯ ನಾಗರಿಕರು ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿ ಗಮನ ಸೆಳೆದರು.
ಹಿರಿಯ ನಾಗರಿಕರ ಆರೋಗ್ಯ, ಚೈತನ್ಯ ಹಾಗೂ ಸಾಮಾಜಿಕ ಸಕ್ರಿಯತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಆಯೋಜಕರು ತಿಳಿಸಿದರು.