ರಾಯಚೂರು | ಒಳ ಮೀಸಲಾತಿ ಜಾರಿ ಹಿನ್ನೆಲೆ ವಿಜಯೋತ್ಸವ : ಅಂಬೇಡ್ಕರ್ ಪುತ್ತಳಿಗೆ ಹಾಲಿನ ಅಭಿಷೇಕ
Update: 2025-08-22 23:15 IST
ರಾಯಚೂರು: ರಾಜ್ಯ ಸರಕಾರ ಒಳ ಮೀಸಲಾತಿ ಜಾರಿಗೆ ಮುಂದಾಗಿರುವುದನ್ನು ಸ್ವಾಗತಿಸಿ ಒಳ ಮೀಸಲಾತಿ ಹೋರಾಟ ಸಮಿತಿಯಿಂದ ರಾಯಚೂರಿನಲ್ಲಿ ವಿಜಯೋತ್ಸವ ಆಚರಣೆ ನಡೆಯಿತು.
ನಗರದ ಹರಿಜನವಾಡ ಬಡಾವಣೆಯಿಂದ ಒಳ ಮೀಸಲಾತಿ ಹೋರಾಟಗಾರರು ಹಾಗೂ ಮಾದಿಗ ಸಮಾಜದ ಮುಖಂಡರು ವಿಜಯೋತ್ಸವದ ಮೆರವಣಿಗೆ ಆರಂಭಿಸಿ ಪ್ರಮುಖ ರಸ್ತೆಗಳ ಮೂಲಕ ಡಾ.ಬಿ.ಆರ್ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಸ್ಟೇಷನ್ ರಸ್ತೆಯಲ್ಲಿರುವ ಬಾಬು ಜಗಜೀವನ್ ವೃತ್ತಕ್ಕೆ ಹಾಲಿನ ಅಭಿಷೇಕ ಮಾಡಿದರು.
ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಮಾದಿಗ ಸಮಾಜದ ಮುಖಂಡರಾದ ಎಂ ವಿರೂಪಾಕ್ಷಿ, ಒಳ ಮೀಸಲಾತಿಗಾಗಿ ಅನೇಕ ವರ್ಷಗಳಿಂದ ಹೋರಾಟ ನಡೆದಿದೆ. ರಾಜ್ಯ ಸರಕಾರ ತಡವಾಗಿಯಾದರೂ ಒಳ ಮೀಸಲಾತಿ ಜಾರಿಗೊಳಿಸಿದ್ದು ಶ್ಲಾಘನೀಯ. ಅದರೆ ಸಣ್ಣಪುಟ್ಟ ಗೊಂದಲ ನಿವಾರಿಸಿ ಅನುಷ್ಠಾನ ಗೊಳಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ಮಾಡಗಿರಿ ನರಸಿಂಹಲು, ಎಸ್ ಮಾರೆಪ್ಪ, ಎಂ.ಆರ್ ಬೇರಿ ಮತ್ತಿತರರು ಉಪಸ್ಥಿತರಿದ್ದರು.