×
Ad

ರಾಯಚೂರು | ವಕ್ಫ್‌ ಮಂಡಳಿ ಚುನಾವಣೆ : ಇಬ್ಬರು ಅಭ್ಯರ್ಥಿಗಳಿಗೆ ನೋಟಿಸ್

Update: 2024-11-18 21:22 IST

ಸಾಂದರ್ಭಿಕ ಚಿತ್ರ

ರಾಯಚೂರು : ರಾಜ್ಯದಲ್ಲಿ ನಡೆಯುತ್ತಿರುವ ವಕ್ಫ್ ಮಂಡಳಿ ಸದಸ್ಯರ ಚುನಾವಣೆಗೆ ನೀತಿ ಸಂಹಿತೆ ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಅಭ್ಯರ್ಥಿಗಳಿಗೆ ಚುನಾವಣಾ ಅಧಿಕಾರಿ ಶೋಕಾಸ್ ನೋಟಿಸ್ ಜಾರಿ ಮಾಡಿ 24 ಗಂಟೆಯೊಳಗೆ ಉತ್ತರಿಸುವಂತೆ ಗಡುವು ನೀಡಿದ್ದಾರೆ.

ಅನ್ವರ್ ಭಾಷಾ ಮತ್ತು ಸರವರ್ ಬೇಗ್ ಅವರಿಗೆ ನೋಟಿಸ್ ಜಾರಿ ಮಾಡಿ ನೋಟಿಸ್ ಗೆ 24 ಗಂಟೆಯೊಳಗೆ ಸ್ಪಷ್ಠನೆ ನೀಡದಿದ್ದಲ್ಲಿ ಶಿಸ್ತು ಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಜಿಲ್ಲೆಯ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಮೌಲಾನಾ ಫರೀದ್ ಖಾನ್ ಅವರು ಮತದಾರರಾದ ಮುತವಲ್ಲಿಗಳಿಗೆ ದೂರವಾಣಿ ಕರೆ ಮಾಡಿ ಅನ್ವರ್ ಭಾಷಾ ಮತ್ತು ಸರವರ್ ಬೇಗ್ ಪರ ಮತದಾನ ಮಾಡಬೇಕೆಂದು ಹೆದರಿಸುತ್ತಿದ್ದಾರೆ ಎಂದು ದೂರು ನೀಡಿದ್ದಾರೆ ಎನ್ನಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 16 ಮತದಾರರಿದ್ದಾರೆ. ಪಾರದರ್ಶಕವಾಗಿ ಚುನಾವಣೆ ನಡೆಯಬೇಕೆಂಬ ನಿಟ್ಟಿನಲ್ಲಿ ದೂರು ನೀಡಲಾಗಿದೆ ಎಂದು ದೂರುದಾರರು ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News