Raichur | ಕರಡಕಲ್‌ನಲ್ಲಿ ಮಹಿಳೆ ಅನುಮಾನಾಸ್ಪದವಾಗಿ ಮೃತ್ಯು : ಅತ್ಯಾಚಾರವೆಸಗಿ ಕೊಲೆ ಶಂಕೆ

Update: 2026-08-20 19:15 IST

ಲಿಂಗಸುಗೂರು: ಲಿಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದಲ್ಲಿ ಮಹಿಳೆಯೋರ್ವರ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ಅತ್ಯಾಚಾರವೆಸಗಿ ಕೊಲೆ ಎಸಗಿರುವ ಶಂಕೆ ವ್ಯಕ್ತವಾಗಿದೆ.  

ರಾಣೆಮ್ಮ(35) ಎಂಬವರ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ರಾಣೆಮ್ಮ ಅವರು ಬುಧವಾರ ಸಂಜೆ ಕಟ್ಟಿಗೆ ತರಲು ಜಾಲಿಬೆಂಚಿ ಗ್ರಾಮದ ಕಡೆಗೆ ತೆರಳಿದ್ದರು. ಗುರುವಾರ ಹೊಲದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಅವರನ್ನು  ಅತ್ಯಾಚಾರ ಎಸಗಿ ಕೊಲೆ‌ ಮಾಡಿರುವ ಶಂಕೆ ವ್ಯಕ್ತವಾಗಿದೆ.  

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. 

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News