ರಾಯಚೂರು | ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸ್ವಾವಲಂಬಿಗಳಾಗಿದ್ದಾರೆ : ಸೌಮ್ಯಾರೆಡ್ಡಿ
ರಾಯಚೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸ್ವಾವಲಂಬಿಗಳಾಗಿದ್ದಾರೆ. ಸರ್ಕಾರ ಬಿಜೆಪಿಯಂತೆ ಸುಳ್ಳು ಆಶ್ವಾಸನೆ ನೀಡದೇ ನುಡಿದಂತೆ ನಡೆಯುತ್ತಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸೌಮ್ಯಾರೆಡ್ಡಿ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಬೇಟಿ ಪಡಾವೋ, ಬೇಟಿ ಬಜಾವೋ ಎಂದು ಹೇಳುತ್ತಾರೆ. ಆದರೆ ಮಹಿಳೆಯರಿಗೆ ರಕ್ಷಣೇಯೇ ಇಲ್ಲದಂತಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಗಳೆಲ್ಲವೂ ಸುಳ್ಳಾಗಿದೆ ಎಂದು ಕಿಡಿಕಾರದರು.
ಒಂದು ಕೋಟಿ ಉದ್ಯೋಗ ಸೃಷ್ಟಿ ಸೇರಿ ಅಚ್ಚೇ ದಿನ ಬರಲೇ ಇಲ್ಲ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿವೆ. ಇನ್ನೂ ಮೂರು ವರ್ಷದ ಅವಧಿಯಲ್ಲಿ ಮತ್ತಷ್ಟು ಉತ್ತಮ ಕೆಲಸ ಕಾಂಗ್ರೆಸ್ ಮಾಡುತ್ತದೆ ಎಂಬ ವಿಶ್ವಾಸ ರಾಜ್ಯದ ಮಹಿಳೆಯರಲ್ಲಿ ಮೂಡಿದೆ. ಗೃಹ ಲಕ್ಷ್ಮೀ ಹಣ ಪಾವತಿ ತಾಂತ್ರಿಕ ಕಾರಣದಿಂದ ವಿಳಂಬವಾಗಿರಬಹುದು. ಆದರೆ ಮೂರು ತಿಂಗಳ ಹಣ ಶೀಘ್ರದಲ್ಲಿ ಬಿಡುಡಗೆಯಾಗಲಿದೆ. ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸಮಾಡುತ್ತಿದ್ದಾರೆ ಎಂದು ಟೀಕಿಸಿದರು.
ನಟಿ ರಮ್ಯಾ ವಿರುದ್ದ ದರ್ಶನ ಅಭಿಮಾನಿಗಳು ಅಸಭ್ಯ ಸಂದೇಶ ರವಾನಿಸಿರುವುದು ಖಂಡನೀಯ. ರಮ್ಯಾರೊಂದಿಗೆ ಮಹಿಳಾ ಕಾಂಗ್ರೆಸ್ ನಿಲ್ಲುತ್ತದೆ. ಬಿಜೆಪಿ ಮತ್ತು ಆರೆಸ್ಸೆಸ್ ಮಹಿಳೆಯರು ಮಾತನಾಡದಂತೆ ತಡೆಯುತ್ತಿದೆ. ಆದರೆ ಕಾಂಗ್ರೆಸ್ ಮಹಿಳೆಯರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ನಿರ್ಮಾಲಾ ಬೆಣ್ಣೆ ಸೇರಿ ಅನೇಕರಿದ್ದರು.