ರಾಯಚೂರು: ದೇವಿನಗರದ ಸವಿತಾ ಸಮಾಜ ಮಹಿಳಾ ಘಟಕದ ವತಿಯಿಂದ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಗಾಯತ್ರಿ ಜಿಂದಪ್ಪ ಅವರಿಗೆ ಪ್ರಥಮ ಬಾರಿಗೆ ಸನ್ಮಾನ ಸಮಾರಂಭ ಆಯೋಜಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಗಾಯತ್ರಿ ಜಿಂದಪ್ಪ, ಮಹಿಳಾ ಘಟಕದ ಪದಾಧಿಕಾರಿಗಳು, ಸಮಾಜದ ಮುಖಂಡರು, ಯುವಕರು ಹಾಗೂ ಹಿರಿಯರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿ ಸಂತಸ ವ್ಯಕ್ತಪಡಿಸಿದರು. ಮಹಿಳೆಯರು ಅಡುಗೆ ಮನೆಗೆ ಮಾತ್ರ ಸೀಮಿತವಾಗದೆ, ಹೊರಜಗತ್ತಿಗೆ ಬಂದು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಕರೆ ನೀಡಿದರು.

ಸಮಾಜದಲ್ಲಿನ ಹಿಂದುಳಿದ ವರ್ಗಗಳು ಒಗ್ಗಟ್ಟಿನಿಂದ ಶ್ರಮಿಸಿ ಸಮಾಜಕ್ಕೆ ಮಾರ್ಗದರ್ಶಕರಾಗಬೇಕು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರೊಂದಿಗೆ ಚರ್ಚಿಸಿ ಸಮಾಜಕ್ಕೆ ಸಿಎ ನಿವೇಶನ ಹಂಚಿಕೆ ಮಾಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುವುದಾಗಿ ತಿಳಿಸಿದರು.

ಮಹಿಳೆಯರು ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಬೇಕು ಎಂಬ ಆಶಯವನ್ನೂ ಅವರು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬಸವರಾಜ ಬೆಳಗಲ್, ಆನಂದ ನಿಂಗಲ್ ದಿನ್ನಿ, ಜಯಮ್ಮ, ಯಲ್ಲಮ್ಮ, ಸುಶೀಲ, ಲಕ್ಷ್ಮೀ, ಶಶಿಕಲಾ, ನಾಗವೇಣಿ, ಪ್ರೇಮಲಮ್ಮ, ಶ್ರೀದೇವಿ, ಪುಷ್ಪಾ, ಗೀತಾಂಜಲಿ, ಗಾಯತ್ರಿ, ವಿಜಯಲಕ್ಷ್ಮಿ, ಕಿಷ್ಟಮ್ಮ, ಪಾರ್ವತಿ, ಸುಮಲತಾ, ಗಂಗಮ್ಮ, ಶಾಂತಮ್ಮ, ಉಷಾರಾಣಿ, ಸರಸ್ವತಿ, ಜಮುನಾ, ಪ್ರಾಣೇಶ್, ರಮೇಶ, ಉಪೇಂದ್ರ, ವಿಶ್ವನಾಥ, ಪ್ರವೀಣ ಕುಮಾರ್, ಪುಲಿಕೊಂಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಬಾವಸಲಿ ರಾಯಚೂರು/ವಾರ್ತಾಭಾರತಿ

ರಾಯಚೂರು ಜಿಲ್ಲಾ ವರದಿಗಾರರು

ಬಾವಸಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ