×
Ad

ರಾಯಚೂರು | ವಿಶ್ವ ಮಲೇರಿಯಾ ದಿನಾಚರಣೆ

Update: 2025-04-28 21:33 IST

ರಾಯಚೂರು : ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ವಿಭಾಗ ರಾಯಚೂರು ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಇತ್ತಿಚೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾವನ್ನು ಜರುಗಿಸಲಾಯಿತು.

ಈ ವೇಳೆ ತಾಲೂಕು ವಿಬಿಡಿ ತಾಂತ್ರಿಕ ಮೇಲ್ವಿಚಾರಕರಾದ ಸಂಧ್ಯಾ ನಾಯಕ ಅವರು ಮಾತನಾಡಿ, ಸೊಳ್ಳೆ ನಿಯಂತ್ರಣ ಕ್ರಮಗಳು ಮನೆಯೊಳಗೆ ಮತ್ತು ಮೇಲ್ಛಾವಣಿಯ ನೀರಿನ ತೊಟ್ಟಿಗಳಲ್ಲಿನ ನೀರನ್ನು ವಾರಕ್ಕೊಮ್ಮೆ ನೀರನ್ನು ಖಾಲಿ ಮಾಡಿ, ಉಜ್ಜಿ, ಒಣಗಿಸಿ ಮತ್ತೆ ತುಂಬುವುದು ಭದ್ರವಾಗಿ ಮುಚ್ಚಳಿಕೆಯಿಂದ ಮುಚ್ಚುವುದು, ಮನೆಯ ಒಳಗೆ ಹಾಗೂ ಹೊರಗೆ ಯಾವುದೇ ಕಾರಣಕ್ಕೂ ಮಳೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಒಡೆದ ಬಾಟಲಿ, ಟಿನ್, ಟೈರು, ತೆಂಗಿನ ಚಿಪ್ಪು, ಇತ್ಯಾದಿಗಳಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು ಮತ್ತು ಚರಂಡಿಗಳಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಾನಯ್ಯ, ಎಲ್‌ಟಿಓ ಜಿಲ್ಲಾ ಹಿರಿಯ ನೋಡೆಲ್ ಅಡಿವೆಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿ ಅಶೊಕ ಪಾಟಿಲ್, ಮಹೇಶ ಎಂ, ಸಾಲ್ವಿನ ಜಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಪಿಹೆಚ್‌ಸಿಓ, ಎಸ್‌ಕೆಇ ಪ್ಯಾರಾಮೇಡಿಕಲ್ ಕಾಲೇಜಿನ ಪ್ರಾಂಶುಪಾಲರು, ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News