×
Ad

Raichur | ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಯುವಕ ಮೃತ್ಯು

Update: 2026-05-19 12:57 IST

ಸಾಂದರ್ಭಿಕ ಚಿತ್ರ | PC : Gemini AI

ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಗ್ರಾಮದ ನಬಿಸಾಬ್ (18) ಮೃತ ಯುವಕನಾಗಿದ್ದು, ಸ್ನೇಹಿತರೊಂದಿಗೆ ಗ್ರಾಮದ ಹೊಂಡಕ್ಕೆ ಈಜಾಡಲು ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈಜುತ್ತಿದ್ದಾಗ ನಬಿಸಾಬ್ ಕೆಸರಲ್ಲಿ ಸಿಲುಕಿಕೊಂಡು ಹೊರಬರಲಾಗದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಈ ಘಟನೆ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News