ರಾಯಚೂರು, ಸೆ. 8: ಜಿಲ್ಲೆಯ ಯಾಪಲದಿನ್ನಿ ಪೊಲೀಸ್ ಠಾಣೆ ವ್ಯಾಪ್ತಿಯ ಚಂದ್ರಬಂಡ ಗ್ರಾಮದ ಅಶ್ವಿನಿ (19) ಎಂಬ ಯುವತಿ ಸೆಪ್ಟೆಂಬರ್ 1ರ ಬೆಳಗಿನ ಜಾವ ಮನೆಯಿಂದ ನಾಪತ್ತೆಯಾಗಿದ್ದು, ಆಕೆಯ ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಲಾಗಿದೆ.

ಯುವತಿಯ ತಾಯಿ ತಾಯಮ್ಮ ನೀಡಿದ ದೂರಿನ ಆಧಾರದಲ್ಲಿ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 67/2026ರಡಿ ಮಹಿಳೆ ಕಾಣೆಯಾದ ಪ್ರಕರಣ ದಾಖಲಾಗಿದೆ.

ದೂರಿನ ಪ್ರಕಾರ, ಆಗಸ್ಟ್ 31ರ ರಾತ್ರಿ ಕುಟುಂಬದವರು ಮನೆಯಲ್ಲೇ ಮಲಗಿದ್ದರು. ಸೆಪ್ಟೆಂಬರ್ 1ರ ಬೆಳಗ್ಗೆ ಸುಮಾರು 3 ಗಂಟೆಗೆ ಎದ್ದಾಗ ಅಶ್ವಿನಿ ಮನೆಯಲ್ಲಿ ಕಾಣಿಸದ ಹಿನ್ನೆಲೆಯಲ್ಲಿ ಮನೆಯ ಸುತ್ತಮುತ್ತ ಹಾಗೂ ಗ್ರಾಮದಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿಲ್ಲ. ಇದೇ ವೇಳೆ ಗ್ರಾಮದ ವೀರೇಶ್ ಎಂಬಾತ ಕೂಡ ಗ್ರಾಮದಲ್ಲಿ ಕಾಣಿಸದಿರುವ ಕಾರಣ, ಆತ ಯುವತಿಯನ್ನು ಕರೆದುಕೊಂಡು ಹೋಗಿರಬಹುದೆಂಬ ಅನುಮಾನ ವ್ಯಕ್ತಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಣೆಯಾದ ಅಶ್ವಿನಿ 19 ವರ್ಷದವರಾಗಿದ್ದು, ಕೆಂಪು ಮೈಬಣ್ಣ, ದುಂಡನೆಯ ಮುಖ, ಕಪ್ಪು ಕೂದಲು ಹೊಂದಿದ್ದಾರೆ. ನಾಪತ್ತೆಯಾಗುವ ವೇಳೆ ಕಪ್ಪು ಬಣ್ಣದ ಪ್ಯಾಂಟ್ ಹಾಗೂ ತಿಳಿನೀಲಿ ಬಣ್ಣದ ಟಾಪ್ ಧರಿಸಿದ್ದರು. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ.

ಈ ಚಹರೆಯ ಯುವತಿ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಯಾಪಲದಿನ್ನಿ ಪೊಲೀಸ್ ಠಾಣೆ, ಗ್ರಾಮೀಣ ವೃತ್ತ ಸಿಪಿಐ ಅಥವಾ ರಾಯಚೂರು ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಗೆ ತಕ್ಷಣ ಮಾಹಿತಿ ನೀಡುವಂತೆ ಯಾಪಲದಿನ್ನಿ ಠಾಣೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor