Raichuru | ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಯುವಕನ ಬಂಧನ
Update: 2026-08-10 09:53 IST
ರಾಯಚೂರು: ಸಾಮಾಜಿ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ಪ್ರಚೋದನಕಾರಿ ಪೋಸ್ಟ್ ಗಳನ್ನು ಫಾರ್ವರ್ಡ್ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಸದರ್ ಬಜಾರ್ ಪೊಲೀಸರು ಬಂಧಿಸಿದ್ದಾರೆ.
ಮುಹಮ್ಮದ್ ಶಾಹಿಲ್ ಬಂಧಿತ ಆರೋಪಿ. ಈತನು 'ರಾಣಾ ಬಾಯ್' ಎಂಬ ಇನ್ಸ್ಟಾಗ್ರಾಂ ಖಾತೆ ಹೊಂದಿರುವ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ. ರಾಣಾ ಬಾಯ್ ಖಾತೆಯಿಂದ ತನಗೆ ಬರುತ್ತಿದ್ದ ಪ್ರಚೋದನಕಾರಿ ಪೋಸ್ಟ್ ಗಳನ್ನು ಶಾಹಿಲ್ ಫಾರ್ವರ್ಡ್ ಮಾಡಿ, ಪೋಸ್ಟ್ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿ ನೀಡಿದ ದೂರಿನ ಮೇರೆಗೆ ಸದರಾಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮೊಬೈಲ್ ಫೋನ್ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.