ರಾಯಚೂರು: ರಾಯಚೂರು ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಒಂದರಿಂದ ಎರಡು ಗಂಟೆಗಳ ಕಾಲ ನಿರಂತರ ಮಳೆ ಸುರಿದಿದೆ.

ಜಿಲ್ಲೆಯಲ್ಲಿ ಸಕಾಲಕ್ಕೆ ಮಳೆ ಬಾರದ ಕಾರಣ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ಹಾಗೂ ಜಾನುವಾರುಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದರು. ಅನೇಕ ದಿನಗಳಿಂದ ಮಳೆಯಿಲ್ಲದೆ ಹತ್ತಿ, ಭತ್ತ, ತೊಗರಿ ಸೇರಿದಂತೆ ವಿವಿಧ ಬೆಳೆಗಳು ಒಣಗುವ ಸ್ಥಿತಿಗೆ ತಲುಪಿದ್ದವು.

ಮಳೆಯಾಗಲೆಂದು ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ಭಜನೆ ಹಾಗೂ ಪೂಜೆಗಳು ನಡೆದಿದ್ದರೆ, ರಾಯಚೂರು ನಗರ, ಸಿಂಧನೂರು, ಲಿಂಗಸುಗೂರು ಸೇರಿದಂತೆ ಹಲವು ಕಡೆ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು.

ಮಂಗಳವಾರ ಸುರಿದ ಮಳೆಯಿಂದ ರೈತರಲ್ಲಿ ಹೊಸ ಆಶಾಭಾವನೆ ಮೂಡಿದ್ದು, ಒಣಗುತ್ತಿದ್ದ ಬೆಳೆಗಳಿಗೆ ಜೀವಕಳೆ ಬಂದಂತಾಗಿದೆ. ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ನೀರು ಹರಿದರೂ, ಬಿಸಿಲಿನ ತಾಪದಿಂದ ಕಂಗೆಟ್ಟ ಜನರು ನಿರಾಳರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor