ಬರದ ಛಾಯೆ: ರಾಯಚೂರಿನಲ್ಲಿ ಸಚಿವ ಡಾ. ಅಜಯ್ ಧರ್ಮಸಿಂಗ್ ರಿಂದ ಅಧಿಕಾರಿಗಳ ಸಭೆ

Update: 2026-08-07 12:08 IST

ರಾಯಚೂರು: ಬರ ಪರಿಸ್ಥಿತಿ, ಕುಡಿಯುವ ನೀರಿನ ಕೊರತೆ ಮತ್ತು ಬೆಳೆ ಹಾನಿಯ ಸಮಗ್ರ ಅಧ್ಯಯನಕ್ಕಾಗಿ ಸಂಪುಟ ಸಚಿವ ಡಾ.ಅಜಯ್ ಧರ್ಮಸಿಂಗ್ ಇಂದು ರಾಯಚೂರು ಜಿಲ್ಲೆಗೆ ಆಗಮಿಸಿದ್ದು, ಜಿಲ್ಲೆಯ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಅಧಿಕಾರಿಗಳ ಸಭೆ ಕರೆದು ಮಾಹಿತಿ ಪಡೆದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ದೇಶನದಂತೆಆ.7 ಮತ್ತು 8ರಂದು ಎರಡು ದಿನಗಳ ಪ್ರವಾಸ ಕೈಗೊಂಡಿರುವ ಸಚಿವರು, ಇಂದು ರಾಯಚೂರು ಗ್ರಾಮಾಂತರ, ದೇವದುರ್ಗ, ಲಿಂಗಸುಗೂರು ಹಾಗೂ ಮಸ್ಕಿ ತಾಲೂಕುಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಜಿಲ್ಲಾಧಿಕಾರಿ, ಜಿಲ್ಲೆಯ ಗ್ರಾಮಾಂತರ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್, ಜಿಲ್ಲಾಧಿಕಾರಿ ಪೂವಿತಾ ಎಸ್. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಕ್ಷು ಗಿರಿ, ಕೃಷಿ ಇಲಾಖೆಯ ಜಂಟಿ ನಿರ್ದೆಶಕರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದರು.

ರಾಯಚೂರು ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಹತ್ತಿ , ಭತ್ತ, ಮುಂಗಾರು ಹಂಗಾಮಿನ ಬೆಳೆಗಳು ಹಾನಿಗೊಳಗಾಗಿರುವುದಾಗಿ ವರದಿಯಾಗಿದೆ. ಅಂತರ್ಜಲ ಮಟ್ಟವು ಗಣನೀಯವಾಗಿ ಕುಸಿದಿದೆ ಎಂದು ಜಿಲ್ಲಾಧಿಕಾರಿ ಸಭೆಯಲ್ಲಿ ತಿಳಿಸಿದ್ದಾರೆ.

ಸಚಿವರು ರೈತರ ಸಮಸ್ಯೆಯ ಕುರಿತು ಜಿಲ್ಲಾಧಿಕಾರಿಯೊಂದಿಗೆ ವರದಿಗಳ ಸಮೇತ ವಿವರವಾಗಿ ಚರ್ಚೆ ನಡೆಸಿದ ಜಿಲ್ಲಾಧಿಕಾರಿ, ಬರ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದರು.

ಆ.8ರಂದು ಸಿಂಧನೂರು, ಮಾನ್ವಿ ಹಾಗೂ ರಾಯಚೂರು ತಾಲೂಕುಗಳಿಗೆ ಭೇಟಿ ನೀಡಿ, ಅಪರಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ಪರಿಶೀಲನಾ ಸಭೆ ನಡೆಸಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News